ಬೀದರ್: ಅತಿವೃಷ್ಟಿಯಿಂದಾಗಿ ತೀವ್ರ ಹಾನಿಗೊಳಗಾದ ಬೀದರ್ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನ್ಸನ್ ಘೋಡೆ ಮನವಿ ಮಾಡಿದ್ದಾರೆ.
ಈ ಕುರಿತು ಅವರು ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರಿಗೆ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಔರಾದ್ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಅತಿ ಹೆಚ್ಚು ನಷ್ಟವಾಗಿದೆ. ರೈತರ ಬೆಳೆ, ರಸ್ತೆ, ಸೇತುವೆಗಳು ಸಂಪೂರ್ಣ ಹಾಳಾಗಿವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ರೈತರು, ಕೃಷಿ ಕೂಲಿ ಕಾರ್ಮಿಕರು ಹಾಗೂ ಬಡವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.
ಖುದ್ದು ಬೀದರ್ ಜಿಲ್ಲೆಗೆ ಭೇಟಿ ನೀಡಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಈ ಮೂಲಕ ಜಿಲ್ಲೆಯ ಜನರಿಗೆ ನೆರವಾಗಬೇಕು ಎಂದು ಕೋರಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC