ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕ್ಯಾಸಲ್ ರಾಕ್, ಕೊಲ್ಲೂರು, ಕಾರ್ಕಳ, ಕೋಟ, ಸಿದ್ದಾಪುರ, ಕುಮಟಾ, ಕಾರವಾರ, ಶಿರಾಲಿ, ಗೇರುಸೊಪ್ಪ, ಧರ್ಮಸ್ಥಳ, ಸುಬ್ರಹ್ಮಣ್ಯ, ಬೆಳ್ತಂಗಡಿ, ಕೊಟ್ಟಿಗೆಹಾರ, ಜಾನ್ಮನೆ, ಸಿದ್ದಾಪುರ, ಮಂಕಿ, ಹೊನ್ನಾವರ, ಗೋಕರ್ಣ, ಕುಂದಾಪುರ, ಅಕ್ಕಿಆಲೂರು, ಕಿರವತ್ತಿ, ಮುಲ್ಕಿ, ಮಾಣಿ, ಗುಬ್ಬಿ, ಕಮ್ಮರಡಿ, ಎನ್ಆರ್ಪುರ, ಜಯಪುರ, ಸಕಲೇಶಪುರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


