ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನಲ್ಲಿ ರೈತರಿಂದ 67.94 ಎಕರೆ ಕೃಷಿ ಭೂಮಿಯನ್ನು ಸಚಿವರ ಆಪ್ತರಾದ ವಿದ್ಯಾ ಸುವರ್ಣ-ಗಜಾನಂದ ದಂಪತಿ ಖರೀದಿಸಿದ್ದಾರೆ. 4.15 ಕೋಟಿ ರೂಪಾಯಿಗೆ ಜಮೀನು ಖರೀದಿಸಲಾಗಿದೆ. ಈ ಜಮೀನಿನ ಖರೀದಿ ಪ್ರಕ್ರಿಯೆ ನಡೆಸಿದರೆ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ. ಜಮೀನು ಕೊಟ್ಟ ರೈತರಿಗೆ ದೊಡ್ಡ ಅನ್ಯಾಯವಾಗಲಿದೆ ಎಂದು ಶ್ರೀರಾಮಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಕಾರ್ಕಳ ಶಾಸಕ, ಸಚಿವ ಸುನಿಲ್ ಕುಮಾರ್ ಹೆಸರು ಉಲ್ಲೇಖಿಸದೆಯೇ ಅವರ ವಿರುದ್ಧ ಆರೋಫ ಮಾಡಿದ್ದಾರೆ. ಜತೆಗೆ, ಈ ವಿಚಾರವಾಗಿ ಉಡುಪಿಯ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಮುತಾಲಿಕ್ ಈ ಆರೋಪ ಮಾಡಿದ್ದು ರಾಜಕೀಯವಾಗಿ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy