ತುಮಕೂರು: ವಿದ್ಯಾರ್ಥಿನಿಯರು ಕಾಲೇಜು ಮುಂಭಾಗದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಆಗಮಿಸಿದ್ದು, ಆದರೆ ವಿದ್ಯಾರ್ಥಿನಿಯರಿಗೆ ಹಿಜಾಬ್ ನೊಂದಿಗೆ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ.
ಪೊಲೀಸರು ವಿದ್ಯಾರ್ಥಿನಿಯರ ಮನವೋಲಿಕೆಗೆ ಸಾಕಷ್ಟು ಪ್ರಯತ್ನ ನಡೆಸಿದರೂ ಹಠ ಹಿಡಿದಿರುವ ವಿದ್ಯಾರ್ಥಿನಿಯರು, ಹಿಜಾಬ್ ಇಲ್ಲದೆ ತರಗತಿ ಪ್ರವೇಶಿಸುವುದಿಲ್ಲ ಎಂದು ತರಗತಿ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ವಿವಾದ ದಿನೇ ದಿನೇ ತಾರಕ್ಕಕ್ಕೇರುತ್ತಿದ್ದು, ತರಗತಿ ಪ್ರವೇಶಕ್ಕೆ ಅನುಮತಿ ನೀಡದೇ ಇರುವುದನ್ನು ವಿರೋಧಿಸಿ ವಿದ್ಯಾರ್ಥಿನಿಯರು, ತುಮಕೂರಿನ ಟೌನ್ ಹಾಲ್ ಬಳಿಯಿರುವ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿಯೂ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಹಿಜಾಬ್ ಧರಿಸಿ ಶಾಲೆಗೆ ಪ್ರವೇಶ ನೀಡಲು ಶಾಲಾ ಸಿಬ್ಬಂದಿ ನಿರಾಕಿರಿಸಿದ್ದು, ಆದರೆ, ನಾವು ಹಿಜಾಬ್ ಧರಿಸಿಯೇ ಬರುತ್ತೇವೆ. ಇಲ್ಲವಾದರೆ, ಶಾಲೆಗೆ ಬರುವುದಿಲ್ಲ ಎಂದು ವಿದ್ಯಾರ್ಥಿನಿಯರು ಹೇಳುತ್ತಿದ್ದು, ಕೊನೆಗೆ ಅಸಹಾಯಕರಾಗಿ ಮನೆಗೆ ತೆರಳುತ್ತಿರುವುದು ಕಂಡು ಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy