ನೈರೋಬಿ: ಮಿಲಿಟರಿ ಹೆಲಿಕಾಪ್ಟರ್ ಪತನವಾಗಿದ್ದು, ಅಪಘಾತದಲ್ಲಿ ಕೀನ್ಯಾದ ರಕ್ಷಣಾ ಮುಖ್ಯಸ್ಥರು ಮತ್ತು ಇತರ ಒಂಬತ್ತು ಉನ್ನತ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ ತಿಳಿಸಿದ್ದಾರೆ.
ಹೆಲಿಕಾಪ್ಟರ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರವೇ ಹೆಲಿಕಾಪ್ಟರ್ ಪತನಗೊಂಡಿದ್ದು, ರಾಜಧಾನಿ ನೈರೋಬಿಯ ವಾಯುವ್ಯಕ್ಕೆ 400 ಕಿಲೋಮೀಟರ್ ದೂರದಲ್ಲಿರುವ ಎಲ್ಜಿಯೊ ಮರಕ್ವೆಟ್ ಕೌಂಟಿಯಲ್ಲಿ ಹೆಲಿಕಾಪ್ಟರ್ ಪತನವಾಯಿತು. ಅವಘಡಕ್ಕೆ ಕಾರಣ ತಿಳಿಯಲು ಕೀನ್ಯಾ ವಾಯುಪಡೆಯು ತನಿಖಾ ತಂಡವನ್ನು ಕಳುಹಿಸಿ ತನಿಖೆ ಮುಂದುವರಿಸಲಾಗಿದೆ ಎಂದು ರುಟೊ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296