ಮಧುಗಿರಿ: ದಲಿತರು ದುಡ್ಡಿನ ಆಮಿಷಕ್ಕೆ ಬಿಜೆಪಿಗೆ ಸೇರುತ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿರೋಧಿಸಿ ಮಧುಗಿರಿ ತಾಲೂಕು ಭಾರತೀಯ ಜನತಾ ಪಾರ್ಟಿಯ ಮುಖಂಡರು ಹಾಗೂ ಮಧುಗಿರಿ ಎಸ್ ಸಿ ಮೋರ್ಚಾ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಧುಗಿರಿಯ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ರವಿ ಕುಮಾರ್, ದುಡ್ಡಿನ ಆಮಿಷಕ್ಕೆ ದಲಿತರು ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಹೇಳಿಕೆ ನೀಡಿದರೆ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಅವರು ಎಚ್ಚರಿಕೆ ನೀಡಿದರು.
ಸಿದ್ದರಾಮಯ್ಯನವರು ನೀಡಿರುವ ಹೇಳಿಕೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ, ಅವರ ಕ್ಷೇತ್ರದಲ್ಲಿ ಕೂಡ ದಲಿತರು ಪ್ರತಿಭಟನೆ ನಡೆಸಲಿದ್ದಾರೆ. ನೀವು ಸ್ಪರ್ಧಿಸುವ ಕ್ಷೇತ್ರದಲ್ಲಿ ಮುಂದಿನ ಚುನಾವಣೆಯಲ್ಲಿ ನಿಮಗೆ ದಲಿತರು ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಧುಗಿರಿ ತಾಲೂಕು ಬಿಜೆಪಿ ಅಧ್ಯಕ್ಷರಾದ ನರಸಿಂಹಮೂರ್ತಿ ಹಾಗೂ ಜಿಲ್ಲಾ ಬಿಜೆಪಿ ಪಕ್ಷದ ಉಪಾಧ್ಯಕ್ಷರಾದ ಸುರೇಶ್ ಹಾಗೂ ಮಧುಗಿರಿಯ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವಿಕೀರ್ತಿ ಮೊದಲಾದವರು ಭಾಗವಹಿಸಿದ್ದರು.
ಸಿದ್ದೇಶ್.N.S..