ಪಾವಗಡ: ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಒಂದು ಸಂಯುಕ್ತ ಆಶ್ರಯದಲ್ಲಿ ಇಂದು ತಿರುಮಣಿಯ ಶ್ರೀ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರವನ್ನು ಶುಕ್ರವಾರ ಆಯೋಜಿಸಲಾಗಿತ್ತು.
ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ತಿರುಮಣಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್, ಗಡಿನಾಡಿನ ಜನತೆಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಯಾವುದೇ ಫಲಾಪೇಕ್ಷೆ ಇಲ್ಲದೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಇಂತಹ ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, ನಮ್ಮ ಸಂಸ್ಥೆ ಆರೋಗ್ಯ ಸೇವಾ ಜೊತೆಯಲ್ಲಿ ಶೈಕ್ಷಣಿಕ, ಸಾಮಾಜಿಕ ಸೇವೆಯಲ್ಲಿ ನಿರತವಾಗಿದ್ದು ಸದಾ ಜನಸೇವೆಯೇ ನನ್ನ ಏಕೈಕ ಗುರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಿರುಮಣಿಯ ರಾಜಕೀಯ ಮುಖಂಡರಾದ ಅರುಣಪ್ಪ, ವೆಂಕಟರಮಪ್ಪ, ಶಂಕರ ಆಸ್ಪತ್ರೆಯ ವೈದ್ಯರಾದ ಮನ್ವಿತ್, ಶ್ರುತಿ ಹಾಗೂ ಸಂಯೋಜಕರಾದ ಹರೀಶ್, ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್ ಉಪಸ್ಥಿತರಿದ್ದರು.
ಶಿಬಿರದಲ್ಲಿ 150 ಕ್ಕೂ ಹೆಚ್ಚು ಜನ ಪರೀಕ್ಷೆಗೆ ಒಳಪಟ್ಟಿದ್ದು 45 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸೆಗೆ ಬಸ್ಸಿನಲ್ಲಿ ಕಳಿಸಿಕೊಡಲಾಯಿತು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


