nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ

    November 6, 2026

    ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?

    November 6, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026
    Facebook Twitter Instagram
    ಟ್ರೆಂಡಿಂಗ್
    • ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ
    • ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?
    • ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ
    • ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ
    • ಬೆಂಡೋಣೆಯಲ್ಲಿ ಸಂಭ್ರಮದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ | ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳೂ ಅಗತ್ಯ: ಸಿಆರ್‌ ಪಿ ರಂಗರಾಜು
    •  ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!
    • ದೀಪಾವಳಿಯಲ್ಲಿ ಪಟಾಕಿ ಸಿಡಿಸುವಾಗ ಎಚ್ಚರ! ಈ ಮುನ್ನೆಚ್ಚರಿಕೆಗಳನ್ನು ಮರೆಯದಿರಿ
    • ರಾವಣನಾಗಿ ಯಶ್ ಪರಕಾಯ ಪ್ರವೇಶ! ರಾವಣ ಪಾತ್ರ ಮಾಡಿದರೆ ಶಾಂತಿ ಹೋಮ ಮಾಡಿಸಬೇಕಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ
    ಚಿಕ್ಕನಾಯಕನಹಳ್ಳಿ November 6, 2026

    ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ

    By Ganesh TumkuruNovember 6, 2026No Comments2 Mins Read
    cb suresh babu mla

    ಚಿಕ್ಕನಾಯಕನಹಳ್ಳಿ : ಮುಂದಿನ ಬಾರಿ ಹೇಮಾವತಿ ಜಲಾಶಯದಿಂದ ನೀರು ಹರಿಸುವ ವೇಳೆಗೆ ದಬ್ಬೇಘಟ್ಟದಿಂದ ಚಿಕ್ಕನಾಯಕನಹಳ್ಳಿ ಹಾಗೂ ಕಂದಿಕೆರೆ ಭಾಗಕ್ಕೆ ನೀರು ತಲುಪಿಸುವ ನಾಲಾ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶಾಸಕ ಸಿ.ಬಿ. ಸುರೇಶ್‌ ಬಾಬು ವಿಶ್ವಾಸ ವ್ಯಕ್ತಪಡಿಸಿದರು.

    ಪಟ್ಟಣದ ಹೊರವಲಯದ ದಬ್ಬೇಘಟ್ಟ ಗೇಟ್ ಬಳಿ ನಡೆಯುತ್ತಿರುವ ಹೇಮಾವತಿ ನಾಲಾ ಕಾಮಗಾರಿಯನ್ನು ಹೇಮಾವತಿ ನಾಲಾ ಇಲಾಖೆಯ ಎಂಜಿನಿಯರ್‌ಗಳು ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಅವರು ಮಾತನಾಡಿದರು.

    ಈ ಬಾರಿ ದಬ್ಬೇಘಟ್ಟದವರೆಗೆ ಹೇಮಾವತಿ ನೀರನ್ನು ಹರಿಸಲಾಗಿದೆ. ಮುಂದುವರಿದ ಕಾಮಗಾರಿಯಾಗಿ ಚಿಕ್ಕನಾಯಕನಹಳ್ಳಿ ಭಾಗದಲ್ಲಿ ನಾಲಾ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿ ಪೂರ್ಣಗೊಂಡರೆ ಚಿಕ್ಕನಾಯಕನಹಳ್ಳಿ ಕೆರೆಯಿಂದ ನಾಗತೀಕೆರೆ, ಸಾದರಹಳ್ಳಿಕೆರೆ ಹಾಗೂ ಕಂದಿಕೆರೆ ಕೆರೆಗಳಿಗೆ ನೈಸರ್ಗಿಕವಾಗಿ ನೀರು ಹರಿದು ತುಂಬಲು ಅನುಕೂಲವಾಗಲಿದೆ. ಮುಂದಿನ ವರ್ಷ ನೀರು ಹರಿಸುವ ವೇಳೆಗೆ ಕಾಮಗಾರಿ ಪೂರ್ಣಗೊಳಿಸಿ ಈ ಭಾಗಕ್ಕೂ ಹೇಮಾವತಿ ನೀರು ಹರಿಸುವ ಉದ್ದೇಶವಿದೆ. ಇದಕ್ಕೆ ಸ್ಥಳೀಯ ರೈತರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ನಾಲೆಯಲ್ಲಿ ಪದೇ ಪದೇ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಕಟ್‌ ಆ್ಯಂಡ್‌ ಕವರ್‌ ತಂತ್ರಜ್ಞಾನದಲ್ಲಿ ಕಾಮಗಾರಿ ಕೈಗೊಳ್ಳುವ ಉದ್ದೇಶವಿದೆ. ಇದಕ್ಕಾಗಿ ಅಗತ್ಯ ಯೋಜನೆ ರೂಪಿಸಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ. ಈ ಸಂಬಂಧ ನೀರಾವರಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಗಣಿಬಾಧಿತ ಪ್ರದೇಶ ಅಭಿವೃದ್ಧಿ ನಿಧಿಯಡಿಯಲ್ಲಾದರೂ ಅನುದಾನ ಮಂಜೂರು ಮಾಡುವಂತೆ ಸರ್ಕಾರದ ಗಮನ ಸೆಳೆಯಲಾಗಿದೆ ಎಂದು ತಿಳಿಸಿದರು.

     11.5 ಕಿ.ಮೀ. ಕಾಮಗಾರಿಯಲ್ಲಿ 9.8 ಕಿ.ಮೀ. ಪೂರ್ಣ

    ಈ ಸಂದರ್ಭದಲ್ಲಿ ಹೇಮಾವತಿ ನಾಲಾ ಕಾಮಗಾರಿಯ ಎಇಇ ಪ್ರಭಾಕರ್ ಮಾಹಿತಿ ನೀಡಿ, ಒಟ್ಟು 11.5 ಕಿ.ಮೀ. ಉದ್ದದ ಕಾಮಗಾರಿಯಲ್ಲಿ ಈಗಾಗಲೇ ದಬ್ಬೇಘಟ್ಟದವರೆಗೆ 9.8 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಭಾಗದಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವು ಕಡೆ ಕಾಮಗಾರಿ ಪೂರ್ಣಗೊಂಡಿದ್ದರೆ, ಇನ್ನು ಕೆಲವು ಕಡೆ ಕೆಲಸ ಮುಂದುವರಿದಿದೆ. ಬಾಕಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದರು.

    ಈ ಮಾರ್ಗದಲ್ಲಿ ಒಟ್ಟು 90 ಮೀಟರ್ ಉದ್ದದ ಕಟ್‌ ಆ್ಯಂಡ್‌ ಕವರ್ ಕಾಮಗಾರಿ ಕೈಗೊಳ್ಳಬೇಕಿದ್ದು, ಈಗಾಗಲೇ ಒಂದು ಭಾಗದ ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡೆಗಳು ಎದುರಾಗಿರುವುದರಿಂದ ಕಾಮಗಾರಿ ವಿಳಂಬವಾಗುತ್ತಿದೆ. ಆದರೂ ಸಾಧ್ಯವಾದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಎಇಇ ಸೌಜನ್ಯ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ವಿಶೇಷ ಚೇತನರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಬೇಕು: ಶಾಸಕ ಸಿ.ಬಿ.ಸುರೇಶ್‌ ಬಾಬು

    November 5, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026

    ಚಿಕ್ಕನಾಯಕನಹಳ್ಳಿ: ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

    October 22, 2026

    Leave A Reply Cancel Reply

    Our Picks

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಅಡಿಕೆ ತೋಟಗಳಿಗೆ ಅಧಿಕಾರಿಗಳ ಭೇಟಿ |  ರೋಗ ನಿಯಂತ್ರಣಕ್ಕೆ ರೈತರಿಗೆ ಸೂಕ್ತ ಮಾರ್ಗದರ್ಶನ

    November 6, 2026

    ಮಧುಗಿರಿ : ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ತೆರೆಯೂರು ಗ್ರಾಮದ ರೈತರ ಅಡಿಕೆ ತೋಟಗಳಿಗೆ ಮಧುಗಿರಿ ತೋಟಗಾರಿಕೆ ಇಲಾಖೆಯ ಅಧಿಕಾರಿ ಶಶಿಧರ್…

    ಹುಲ್ಲು, ಮುಳ್ಳುಗಿಡಗಳ ಪೊದೆಯಾದ ಸರ್ಕಾರಿ ಕಾಲೇಜು ಆಟದ ಮೈದಾನ! | ಕ್ರೀಡಾ ವಿಭಾಗದ ನಿಧಿಯಲ್ಲಿ ₹18 ಲಕ್ಷವಿದ್ದರೂ ನಿರ್ವಹಣೆ ಏಕಿಲ್ಲ?

    November 6, 2026

    ಚೆಸ್‌ ನಲ್ಲಿ ಹಳ್ಳಿ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆ |   ರಾಜ್ಯ ಮಟ್ಟದ ಚಾಂಪಿಯನ್‌ ಶಿಪ್‌ ನಲ್ಲಿ ಯದುನಂದನ್ ಜಿ.ಎನ್. ಸಾಧನೆ

    November 6, 2026

    ಮುಂದಿನ ವರ್ಷ ಚಿಕ್ಕನಾಯಕನಹಳ್ಳಿ, ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು | ನಾಲಾ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕ ಸಿ.ಬಿ. ಸುರೇಶ್‌ ಬಾಬು ಸೂಚನೆ

    November 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.