ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಹೇಮಾವತಿ ಜಲಾಶಯ ಯೋಜನೆಯ ‘ನೀರಾವರಿ ಸಲಹಾ ಸಮಿತಿ ಸಭೆ’ಯು ಬೆಂಗಳೂರಿನ ವಿಕಾಸಸೌಧದ ಕೊಠಡಿ ಸಂಖ್ಯೆ–319ರಲ್ಲಿ ಜರುಗಿತು. ಈ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಸಭೆಯಲ್ಲಿ ಹೇಮಾವತಿ ಜಲಾಶಯದ ಪ್ರಸ್ತುತ ನೀರಿನ ಲಭ್ಯತೆ, ನೀರಾವರಿ ವ್ಯವಸ್ಥೆ, ಜಲಾಶಯದ ನೀರಿನ ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಒದಗಿಸಬೇಕಾದ ಅಗತ್ಯ ನೀರಾವರಿ ಸೌಲಭ್ಯಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
ಹೇಮಾವತಿ ಜಲಾಶಯದ ನೀರನ್ನು ವೈಜ್ಞಾನಿಕವಾಗಿ ಹಾಗೂ ಸಮರ್ಪಕವಾಗಿ ನಿರ್ವಹಿಸುವ ಮೂಲಕ, ಅಚ್ಚುಕಟ್ಟು ಪ್ರದೇಶದ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ವಿಶೇಷ ಒತ್ತು ನೀಡಲಾಯಿತು. “ರೈತರ ಹಿತಕಾಯುವುದೇ ನಮ್ಮ ಪ್ರಥಮ ಆದ್ಯತೆ, ಜಲಾಶಯದ ನೀರಿನ ಸಮರ್ಪಕ ನಿರ್ವಹಣೆಯೇ ನಮ್ಮ ಸಂಕಲ್ಪ” ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.
ಈ ಮಹತ್ವದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ಕೆ.ಎಂ. ಶಿವಲಿಂಗೇಗೌಡ ಅವರು ಸೇರಿದಂತೆ ತುಮಕೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ವಿಧಾನಸಭಾ ಸದಸ್ಯರು ಭಾಗವಹಿಸಿದ್ದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
