ತುಮಕೂರು: ನಗರದ ಹೇಮಾವತಿ ನಾಲಾ ವಲಯ ವಿಶೇಷ ಭೂಸ್ವಾಧೀನ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸೋಮವಾರ ತಡರಾತ್ರಿ 11 ಗಂಟೆಯವರೆಗೂ ಕಾರ್ಯಾಚರಣೆ ನಡೆಸಿದ್ದಾರೆ.
ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ್, ಇನ್ಸ್ ಪೆಕ್ಟರ್ ವಿಜಯಲಕ್ಷ್ಮೀ ನೇತೃತ್ವದ ತಂಡ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಹೇಮಾವತಿ ನಾಲಾವಲಯ ಕಚೇರಿಯ ಅಧಿಕಾರಿಗಳನ್ನು ಮನೆಗೆ ಹೋಗದಂತೆ ತಡೆದು ಕಚೇರಿಯಲ್ಲಿಯೇ ಇರಿಸಿಕೊಂಡಿದ್ದಾರೆ.
ಭೂಸ್ವಾಧೀನ ವೇಳೆ ಭ್ರಷ್ಟಾಚಾರ ನಡೆದಿದೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು ತಡ ರಾತ್ರಿ 11 ಗಂಟೆವರೆಗೂ ಎಸಿಬಿ ಅಧಿಕಾರಿಗಳ ಶೋಧಕಾರ್ಯ ಮುಂದುವರೆಸಿದ್ದರು.
ವರದಿ: ರಾಜೇಶ್ ರಂಗನಾಥ್
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700