ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ.
ಎಲ್ಲಾ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸಬೇಕು. ನಿಗಧಿಪಡಿಸಿದಂತೆ ಕುಡಿವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದ್ದಾರೆ.


