ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಶೆಟ್ಟಿಹಳ್ಳಿ ಗ್ರಾಮದ ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿ, ಮತ್ತೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು ಜನಿಸಿದ್ದರು. ಮತ್ತೆ 4 ನೇ ಮಗುವೂ ಕೂಡ ಹೆಣ್ಣು ಆಗಿರುವುದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz