ನವದೆಹಲಿ: ಹೆಣ್ಣುಮಕ್ಕಳ ಮದುವೆ ವಯಸ್ಸನ್ನು 18ರಿಂದ 21 ವರ್ಷಕ್ಕೆ ಏರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟದ ಅನುಮೋದನೆ ನಂತರ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ ಎಂದು ತಿಳಿದು ಬಂದಿದೆ.
2020ರ ಸ್ವಾತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ ಈ ಯೋಜನೆ ಒಂದು ವರ್ಷದ ನಂತರ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವಕ್ಕೆ ಅನುಮತಿ ನೀಡಿದೆ.
ಸಂಪುಟ ಇದಕ್ಕೆ ಅನುಮೋದನೆ ನೀಡಿದ ಬಳಿಕ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006ಕ್ಕೆ ತಿದ್ದುಪಡಿಯಾಗಲಿದೆ.ೀ ಮೂಲಕ ವಿಶೇಷ ವಿವಾಹ ಕಾಯ್ದೆ ಮತ್ತು ಹಿಂದೂ ವಿವಾಹ ಕಾಯ್ದೆ 1955ರಂತಹ ವೈಯಕ್ತಿಕ ಕಾನೂನುಗಳಿಗೂ ತಿದ್ದುಪಡಿ ತರಲಾಗುತ್ತದೆ ಎಂದು ತಿಳಿದುಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700