ಡೆಂಗ್ಯೂ ಬಹಳ ಅಪಾಯಕಾರಿ ರೋಗವಾಗಿದೆ. ಡೆಂಗ್ಯೂ ಸಮಸ್ಯೆ ರಕ್ತಸ್ರಾವದ ಅಪಾಯವಿದೆ ಮತ್ತು ರೋಗಿಯು ಸಹ ಸಾಯಬಹುದು.ಡೆಂಗಿ ಜ್ವರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಡಂಗಿ ಜ್ವರ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರವು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.
ರೋಗ ಲಕ್ಷಣಗಳು:
* ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು.
*ತೀವ್ರ ತಲೆನೋವು, ಮೈಕೈ & ಕೀಲು ನೋವು, ವಾಕರಿಕೆ ವಾಂತಿ, ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು
* ಬಾಯಿ, ಮೂಗು & ವಸಡುಗಳಲ್ಲಿ ರಕ್ತಸ್ರಾವದ ಗುರುತುಗಳು
* ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು ಕಪ್ಪು ಬಣ್ಣದ ಮಲ ವಿಸರ್ಜನೆ
* ವಿಪರೀತ ಬಾಯಾರಿಕೆ
* ತಣ್ಣನೆಯ ಬಿಳಿಚಿದ ಚರ್ಮ
* ಜ್ಞಾನ ತಪ್ಪುವುದು
* ರಕ್ತದ ಒತ್ತಡದ ಕುಸಿತ & ನಾಡಿ ಬಡಿತದ ಕುಸಿತ-ಇವು ಡೆಂಗಿ ರಕ್ತ ಸ್ರಾವ ಜ್ವರ & ಡೆಂಗಿ ಆಘಾತ ಜ್ವರದ. ಲಕ್ಷಣಗಳು.
ಡೆಂಗ್ಯೂ ತಡೆಗಟ್ಟುವುದು ಹೇಗೆ?
- ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಿ.
- ನೀರಿನ ಟ್ಯಾಂಕ್ ಅನ್ನು (water tank) ಮುಚ್ಚಿಡಿ.
- ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಿ.
- ಚರಂಡಿಗಳನ್ನು ಸ್ವಚ್ಛಗೊಳಿಸಿ.
- ನಿಮಗೆ ಜ್ವರ ಬಂದಾಗ ತಕ್ಷಣ ಡೆಂಗ್ಯೂ ಪರೀಕ್ಷೆ ಮಾಡಿಸಿಕೊಳ್ಳಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA