ಮಂಡ್ಯ: ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮ ಕರ್ನಾಟಕದ ಪ್ರಮುಖ ಪ್ರವಾಸೀ ತಾಣಗಳಲ್ಲೊಂದು. ಇಲ್ಲಿ ಹರಿಯುವ ಕಾವೇರಿ ನದಿಯ ನಡುವಲ್ಲಿ ಚಿಕ್ಕ ಚಿಕ್ಕ ದ್ವೀಪಗಳಿದ್ದು ಇಲ್ಲೆಲ್ಲ ವಲಸೆ ಪಕ್ಷಿಗಳು ವಾಸಿಸುತ್ತವೆ.
ಇದೀಗ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿದಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಬೇಸರ ಸುದ್ದಿಯಿದೆ.ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 19ರಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ರಂಗನತಿಟ್ಟು ಪಕ್ಷಿಧಾಮದ ದೋಣಿ ವಿಹಾರವನ್ನು ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಅಣೆಕಟ್ಟೆಯಿಂದ ಹೆಚ್ಚುವರಿ ನೀರನ್ನು ಬಿಡುತ್ತಿದ್ದು, ಕಾವೇರಿ ನದಿಯು ಉಕ್ಕಿ ಹರಿಯುತ್ತಿದೆ. ಹಾಗಾಗಿ ದೋಣಿ ವಿಹಾರ ಸ್ಥಗಿತಗೊಂಡಿದ್ದು ರಂಗನತಿಟ್ಟು ಪಕ್ಷಿಧಾಮದ ವೀಕ್ಷಣೆಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


