nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಲ್ಲಿ ಮಹಿಷಾಸುರನನ್ನು ಬೆಂಬಲಿಸುತ್ತಾರೆ,  ಅಲ್ಲಿ ಹಮಾಸ್ ಉಗ್ರರನ್ನು ಬೆಂಬಲಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ ಕಿಡಿ
    ತುಮಕೂರು October 13, 2023

    ಇಲ್ಲಿ ಮಹಿಷಾಸುರನನ್ನು ಬೆಂಬಲಿಸುತ್ತಾರೆ,  ಅಲ್ಲಿ ಹಮಾಸ್ ಉಗ್ರರನ್ನು ಬೆಂಬಲಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ ಕಿಡಿ

    By adminOctober 13, 2023No Comments2 Mins Read
    chakravarthy sulibele

    ತುಮಕೂರು: ಪ್ರಧಾನಿ ಸೋಲಿಸಬೇಕೆಂಬ ಇಂಡಿಯಾ ಒಕ್ಕೂಟದವರು ಹಮಾಸ್ ಉಗ್ರರಿಗೆ ಬೆಂಬಲ ನೀಡ್ತಿದ್ದಾರೆ.  ಈ ಸರ್ಕಾರಕ್ಕೆ ರಾಕ್ಷಸರನ್ನು ಬೆಂಬಲಿಸುವುದು ರೂಢಿ. ಇಲ್ಲಿ ಮಹಿಷಾಸುರನನ್ನು ಬೆಂಬಲಿಸುತ್ತಾರೆ.  ಅಲ್ಲಿ ಹಮಾಸ್ ಉಗ್ರರನ್ನು ಬೆಂಬಲಿಸುತ್ತಾರೆ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ.

    ತುಮಕೂರಿನ ರಾಮ ಮಂದಿರದಲ್ಲಿ ಜನಗಣಮನ ಯಾತ್ರೆ ಕಾರ್ಯಕ್ರಮ  ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಒಂದು ಪಾರ್ಟಿಯ ಅಧಿನಾಯಕಿ ಎನ್ ಕೌಂಟರ್‌ನಲ್ಲಿ ಸತ್ತ  ಭಯೋತ್ಪಾದಕನಿಗಾಗಿ ಕಣ್ಣೀರು ಹಾಕ್ತಾರೆ.  ಈ ದೇಶದ ಮೇಲೆ ಆಕ್ರಮಣ ಮಾಡುವಂತಹ ಭಯೋತ್ಪಾದಕರನ್ನು ಬೆಂಬಲಿಸುವವರಿಗೆ, ಈ ದೇಶದ ಅಧಿಕಾರ ಕೊಡೊಕಾಗುತ್ತಾ ಎಂದರು.


    Provided by
    Provided by

    ಪಿ.ಚಿದಂಬರಂ ಅವರು ಈ ದೇಶದ ಹಳ್ಳಿಗರನ್ನು ದಡ್ಡರೆಂದು ಕರೆದ್ರು.  ಪ್ರಧಾನಿ ಮೋದಿ ಭಾರತವನ್ನು ಡಿಜಿಟಲ್ ಎಕಾನಮಿಯಾಗಿ ಬದಲಾಯಿಸಿದರು.  ಇದು ಪೊಲಿಟಿಕಲ್ ಯಾತ್ರೆ ಅಲ್ಲ.  ನಮ್ಮ ಯಾತ್ರೆಗೆ ಎಲ್ಲಾ ಪಾರ್ಟಿಯವರು ಬರ್ತಾರೆ. ವ್ಯಕ್ತಿತ್ವದ ದೃಷ್ಠಿಯಿಂದ ನರೇಂದ್ರ ಮೋದಿಯೆ ಶ್ರೇಷ್ಠ ಎಂದರು.

    ಜನಗಣ ಮನ ಬೆಸೆಯುವ ಯಾತ್ರೆ ಯಾಗಿದೆ, ಜನರನ್ನು ಬೆಸೆಯುವ ಉದ್ದೇಶವಾಗಿದೆ. ರಾಷ್ಟ್ರವನ್ನು ಶ್ರೇಷ್ಠ ಗೊಳಿಸುವ ಉದ್ದೇಶದ ಯಾತ್ರೆ ಯಾಗಿದೇ ಎಂದು  ತಿಳಿಸಿದ್ದಾರೆ.

    ಒಟ್ಟು 3500 ಕಿಲೋ ಮೀಟರ್ ಯಾತ್ರೆ ಮಾಡಿದ್ದೇವೆ. ಚಿತ್ರದುರ್ಗದಲ್ಲಿ ದಲಿತರ ಸಹಭೋಜನ ಮಾಡಿದ್ವಿ.  ಹೀಗೆ ಪ್ರತಿದಿನ ಎಲ್ಲಾ ಸಮುದಾಯದೊಂದಿಗೆ ಚರ್ಚೆ ಮಾಡುತ್ತಿದ್ದೇವೆ ಎಂದರು.

    ಪ್ರಧಾನಿ ಮೋದಿಯವರು ಭಾರತವನ್ನು ಶ್ರೇಷ್ಟಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ನಾವು ಬೆಂಬಲಿಸಿ ಭಾರತವನ್ನು ಶ್ರೇಷ್ಟಗೊಳಿಸೊಣ.  ಮೋದಿಯವರಿಗೆ ಬಲ ತುಂಬುವ ಪ್ರಯತ್ನ ಎಂದರು.

    ಎಲ್ಲರೂ ಮೋದಿಯವರಿಗೆ ಬೆಂಬಲ ಕೊಡುವ ಸಂಕಲ್ಪ ಮಾಡಬೇಕು. ಮತ್ತೊಮ್ಮೆ ಅವರ ಕೈಗೆ ಈ ರಾಷ್ಟ್ರವನ್ನು ಕೊಟ್ಟು ಭಾರತವನ್ನು ವಿಶ್ವ ಗುರು ಮಾಡಬೇಕು.  ಉಚಿತ ಗ್ಯಾರೆಂಟಿಗಳಿಗೆ ಜನ ವೋಟ್ ಹಾಕಿದ್ರೂ.  2 ಸಾವಿರ ರೂಪಾಯಿಗೆ ಓಟ್ ಹಾಕಿದ್ರೂ,  ಅದು ಒಂದು ತಿಂಗಳು ಬಂತು ಇನ್ನೊಂದು ಬರಲಿಲ್ಲ ಎಂದರು.

    ಕರೆಂಟ್ ಫ್ರೀ ಅಂತ ವೋಟ್ ಹಾಕಿದ್ರೂ ಕರೆಂಟ್ ಬರ್ಲಿಲ್ಲ.  ರಾಜ್ಯದಲ್ಲಿ ಉಚಿತ ಗ್ಯಾರಂಟಿಯಿಂದ ಡೆವಲ್ಮೆಂಟ್ ಆಕ್ಟಿವಿಟಿ ಸತ್ತೋಗುತ್ತೆ. ನಮಗೆ ಡೆವಲಪ್ಮೆಂಟ್ ಮಾಡ್ಲಿಕ್ಕೆ ಆಗ್ತಿಲ್ಲ ಎಲ್ಲಾ ಗ್ಯಾರೆಂಟಿಗಳಿಗೆ ಹಣ ಖರ್ಚಾಗ್ತಿದೆ ಈಗಂತ ಕಾಂಗ್ರೆಸ್ ಶಾಸಕರೆ ಹೇಳ್ತಿದ್ದಾರೆ. 1.25 ಲಕ್ಷ ಕೋಟಿ ಹೆಚ್ಚುವರಿ ಹಣ ಬೇಕಾಗಿದೆ ಎಂದರು.

    ದಲಿತರಿಗೆ ಮೀಸಲಾದ ಅನುದಾನವನ್ನು ಬಿಟ್ಟಿ ಭಾಗ್ಯಗಳಿಗೆ ಬಳಸಿಕೊಳ್ಳಲಾಗಿದೆ. ನಾಲ್ಕು ತಿಂಗಳಿಂದ ಬಿಸಿಯೂಟಕ್ಕೆ ಅನುದಾನ ಸಿಕ್ಕಿಲ್ಲ. ಇದೇ ರೀತಿ ಮುಂದುವರೆದರೆ  ಕರ್ನಾಟಕದ ಅಭಿವೃದ್ಧಿ ನಿಲ್ಲುತ್ತೆ ಎಂದರು.

    ಇಂತಹ ಗವರ್ನಮೆಂಟ್ ಕೇಂದ್ರದಲ್ಲಿ ಬಂದರೆ ದೇಶದ ಕಥೆ ಏನಾಗುತ್ತೆ..? ಅದ್ಕೆ ಮೊದಲು ಶುರುಮಾಡಿದ್ದೇವೆ, ಇಲ್ಲಿ ಆಗಿದ್ದಂತಹ ತಪ್ಪು ಬೇರೆ ಕಡೆ ಆಗಬಾರದು.  ಕರ್ನಾಟಕದಲ್ಲಿ ಐದು ವರ್ಷ ಅಭಿವೃದ್ಧಿ ಹಾಳಾದ್ರೂ, ಬೇರೆಕಡೆ ಸೇರ್ಕೊಂಡು ನಾವು ಮುಂದುವರೆಯುವ ಸಾಧ್ಯತೆ ಇದೆ ಎಂದರು.

    ನರೇಂದ್ರ ಮೋದಿಯಂತಹ ವಜ್ರವನ್ನು ಕಳೆದುಕೊಳ್ಳಬಾರದು. ಹಮಾಸ್ ನಂತಹ ರಾಕ್ಷಸ ಉಗ್ರರು ನಮ್ಮ ಪಕ್ಕದಲ್ಲೆ ಇದ್ದಾರೆ. ಪಾಕಿಸ್ಥಾನದಲ್ಲಿ ಲಷ್ಕರೆ ತೊಯಿಬಾ, ಐಸಿಸ್ ಉಗ್ರರಿದ್ದಾರೆ.  ಇಸ್ರೇಲ್ ನಲ್ಲಿ ಆದಂತಹ ದಾಳಿ ನಮ್ಮಮೇಲೆ ಆಗಬೇಕಾಗಿತ್ತು ಎಂದರು.

    ಪ್ರಧಾನಿ ಮೋದಿಯಂತಹ ದೊಡ್ಡ ರಕ್ಷಣಾ ಗೋಡೆ ಇದೆ.  ಇದೇ ವೇಳೆ ಭಾರತ್ ಮಾತಾ ದೇವಿಗೆ ಪೂಜೆ ಸಲ್ಲಿಸಿದರು. 16 ದಿನಗಳಿಂದ ನಮೋ ಬ್ರಿಗೆಡ್ ಯಾತ್ರೆ, ಕೋಲಾರದಿಂದ ಕರಾವಳಿ ಭಾಗದಿಂದ ಉತ್ತರ ಕರ್ನಾಟಕದಲ್ಲಿ ಸುತ್ತಾಡಿ ಇವತ್ತು ತುಮಕೂರಿಗೆ ಬಂದಿದ್ದೇವೆ ಎಂದರು.

    ಸಿದ್ದಗಂಗಾ ಮಠ, ಡಾಬಸ್ಪೇಟೆ ನೆಲಮಂಗದಲ್ಲಿ ಕಾರ್ಯಕ್ರಮವಿದೆ. ಇಂದು ಬೆಂಗಳೂರಿನಲ್ಲಿ ಕೊನೆಯ ಕಾರ್ಯಕ್ರಮವಿದೆ ಎಂದರು.

    admin
    • Website

    Related Posts

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.