ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಸಂಖ್ಯೆ ಬಹಳಷ್ಟಿದೆ.ದಿನ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಮತ್ತಷ್ಟು ರೈಲುಗಳಿಗೆ ಬೇಡಿಕೆಯಿದೆ. ಹಾಗಾಗಿ ಇಲ್ಲಿದೆ ಒಂದು ಸಿಹಿ ಸುದ್ದಿ.
ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಹುಬ್ಬಳ್ಳಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ನೈಋತ್ಯ ರೈಲ್ವೆ ರೈಲು ಸಂಖ್ಯೆ 07339/07340 ಹುಬ್ಬಳ್ಳಿ- ಕ್ರಾಂತಿವೀರಣ್ಣ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣ- ಹುಬ್ಬಳ್ಳಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಸೇವೆಗಳನ್ನು ವರ್ಷಾಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಿದೆ.
ಕ್ರಾಂತಿವೀರಣ್ಣ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಬೆಂಗಳೂರು ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು (07340) ಸೇವೆಯನ್ನು ಜುಲೈ 2 ರಿಂದ ಜನವರಿ 1, 2025 ರವರೆಗೆ ಬೆಂಗಳೂರಿನ ಅಂತ್ಯದಿಂದ ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.
ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಕೆಎಸ್ಆರ್ ಬೆಂಗಳೂರು ಸೂಪರ್ಫಾಸ್ಟ್ ರೈಲು ಹುಬ್ಬಳ್ಳಿ ರೈಲು ನಿಲ್ದಾಣದಿಂದ ರಾತ್ರಿ 11:15 ಕ್ಕೆ ಹೊರಟು ಬೆಳಗ್ಗೆ 6:50 ಕ್ಕೆ ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣವನ್ನು ತಲುಪುತ್ತದೆ. ಈ ಮಾರ್ಗದಲ್ಲಿ, ರೈಲು ಹಾವೇರಿ, ರಾಣೆಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ ಮತ್ತು ಬೆಂಗಳೂರು ರೈಲು ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ರೈಲು ಸಂಖ್ಯೆ 07340 ಬೆಂಗಳೂರು ಮೆಜೆಸ್ಟಿಕ್ನಿಂದ SSS ಹುಬ್ಬಳ್ಳಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ರಾತ್ರಿ 11:55 ಕ್ಕೆ ಹೊರಟು ಮರುದಿನ ಬೆಳಗ್ಗೆ 7:30 ಕ್ಕೆ ಹುಬ್ಬಳ್ಳಿ ರೈಲು ನಿಲ್ದಾಣವನ್ನು ತಲುಪುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA