ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ವಾಹನಗಳ ಸಂಖ್ಯೆಯು ದಿನಕ್ಕಿಂತಲೂ ದಿನ ಹೆಚ್ವುತ್ತಿರುವ ಹಿನ್ನಲೆಯಲ್ಲಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಯ ಅರಿವಿದ್ದರೂ ಅಧಿಕಾರಿಗಳು ಕಣ್ಣಮುಚ್ಚಿ ಕುಳಿತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳಾದ ಎನ್ ಹೆಚ್ ೦4 , ನಿಂದ ಟಿ.ಬಿ. ಸರ್ಕಲ್ ವರೆಗೂ ಹಾಗೂ ಚರ್ಚ್ ರಸ್ತೆ , ಹುಳಿಯಾರ್ ರಸ್ತೆಗಳು , ಅರುಣ್ ಟೆಕ್ಸ್ ಟೈಲ್ ನಿಂದ ವಿ ವಿ ಪುರ ಹೋಗುವ ರಸ್ತೆಗಳಲ್ಲಿ ರಸ್ತೆಯ ಗುಂಡಿಗಳು ಪ್ರತಿದಿನ ಬೆಳಿಗ್ಗೆ ಕೆಲಸ , ಕಛೇರಿಗಳಿಗೆ ಹೋಗುವಂತಹ ಜನಸಾಮನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.
ಈ ರಸ್ತೆಯು ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯ ಮೂಲಕವೇ ದಿನನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನ ಪ್ರಮುಖ ರಸ್ತೆಗಳು , ದುರಾಸ್ತಿಗೊಂಡು ಸುಮಾರು ವರ್ಷಗಳಾದರೂ ಸರ್ಕಾರ ಇದರ ಬಗ್ಗೆ ಸ್ವಲ್ಪವೂ ಸಹ ತಲೆಕೆಡಿಸಿಕೊಂಡಿಲ್ಲ. ಇದರಿಂದಾಗಿ ಹಿರಿಯೂರು ತಾಲ್ಲೂಕಿನ ಸಾರ್ವಜನಿಕರು ನಾಚಿಕೆಗೆಟ್ಟ ಸರ್ಕಾರ ಇದು ಎಂದು ಸರ್ಕಾರದ ಮೇಲೆ ಹಿಡಿಶಾಪ ಹಾಕುತ್ತಿದ್ದಾರೆ .
24 ಘಂಟೆಗಳ ಕಾಲ ವಾಹನಗಳು ಚಲಾಯಿಸುವ ಈ ರಸ್ತೆಯಲ್ಲಿ ಸರಿಯಾದ ಬೀದಿ ದೀಪ ವ್ಯವಸ್ಥೆಗಳು ಕೂಡ ಇಲ್ಲ. ಇದರಿಂದಾಗಿ ಕೊಲೆ,ಮರ್ಡರ್, ಪಿಕ್ ಪಾಕೇಟ್ , ಗಳ ಕಳ್ಳರಿಗೆ ಸರ್ಕಾರವೇ ದಾರಿ ಮಾಡಿಕೊಟ್ಟಂತಾಗಿದೆ ಎನ್ನುವ ಆಕ್ರೋಶದ ಮಾತುಗಳು ಕೂಡ ಕೇಳಿ ಬಂದಿವೆ. ಆದರಿಂದ ತಾಲ್ಲೂಕಿನ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಅವರು ಈ ಕೂಡಲೇ ತಮ್ಮ ಗಮನಕ್ಕೆ ತೆಗೆದುಕೊಂಡು ದುರಾಸ್ತಿಗೊಂಡಿರುವ ರಸ್ತೆಗಳನ್ನು ಸರಿಪಡಿಸಿ ಈ ಟ್ರಾಫಿಕ್ ಜಾಮ್ ಗೆ ಕಡಿವಾಣ ಹಾಕಬೇಕಾಗಿದೆ ಎಂದು ತಾಲ್ಲೂಕಿನ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡಿಕೊಡುವಂತೆ ಈ ಮೂಲಕ ತಾಲ್ಲೂಕಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ವರದಿ: ಮುರುಳಿಧರನ್ ಆರ್. , ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy