ಕಾಫಿ ನಮ್ಮ ಆಯಾಸವನ್ನು ನಿವಾರಿಸಬಲ್ಲದು, ಮನಸ್ಥಿತಿಯನ್ನೂ ಸುಧಾರಿಸಬಲ್ಲದು. ಎಲ್ಲಾ ರುತುವಿನಲ್ಲೂ ಇಷ್ಟಪಟ್ಟು ಕುಡಿಯುವಂತಹ ಪಾನೀಯ ಇದು.ಕಾಫಿಯಲ್ಲಿ ಕೆಫೀನ್ ಎಂಬ ಉತ್ತೇಜಕವಿದೆ, ಇದು ಮೆದುಳನ್ನು ಸಕ್ರಿಯಗೊಳಿಸುತ್ತದೆ. ಏಕಾಗ್ರತೆ ಮತ್ತು ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿ ಒಂದು ದಿನದಲ್ಲಿ ಎಷ್ಟು ಕಾಫಿ ಕುಡಿಯುವುದು ಸುರಕ್ಷಿತ ಎಂಬುದನ್ನು ತಿಳಿದುಕೊಳ್ಳಬೇಕು.
ಹೆಚ್ಚು ಕಾಫಿ ಕುಡಿಯುವುದರಿಂದ ಆತಂಕ, ನಿದ್ರಾಹೀನತೆ, ಅಧಿಕ ರಕ್ತದೊತ್ತಡ ಹೀಗೆ ಅನೇಕ ಸಮಸ್ಯೆಗಳಾಗುತ್ತವೆ. ತಜ್ಞರ ಪ್ರಕಾರ ಒಬ್ಬ ವ್ಯಕ್ತಿ 400 ಮಿಲಿ ಗ್ರಾಂಗಿಂತ ಹೆಚ್ಚು ಕೆಫೀನ್ ಅನ್ನು ಸೇವಿಸಬಾರದು. ಇದು ಸರಿಸುಮಾರು 4 ಕಪ್ ಕಾಫಿಗೆ ಸಮನಾಗಿರುತ್ತದೆ.
ಗರ್ಭಿಣಿಯರು ಕಡಿಮೆ ಕಾಫಿ ಕುಡಿಯಬೇಕು, ಏಕೆಂದರೆ ಇದು ಗರ್ಭಪಾತ ಅಥವಾ ಕಡಿಮೆ ತೂಕದ ಮಗುವಿನ ಜನನಕ್ಕೆ ಕಾರಣವಾಗಬಹುದು.
ಆರೋಗ್ಯವಂತ ವ್ಯಕ್ತಿಗೆ ದಿನಕ್ಕೆ ಮೂರು ಕಪ್ ಕಾಫಿ ಸೇವಿಸಬಹುದು. ಹೆಚ್ಚಿನ ಆರೋಗ್ಯವಂತ ವಯಸ್ಕರಿಗೆ ದಿನಕ್ಕೆ 300 ಮಿಲಿಗ್ರಾಂಗಳಷ್ಟು (mg) ಕೆಫೀನ್ ಅನ್ನು ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಸರಿಸುಮಾರು, ಒಂದು ಕಪ್ ಕಾಫಿ 95-100 ಮಿಲಿಗ್ರಾಂ ಕೆಫೀನ್ ಅನ್ನು ಹೊಂದಿರುತ್ತದೆ. ಆದ್ದರಿಂದ, ಇದು ಸುಮಾರು ನಾಲ್ಕು ಕಪ್ ಕುದಿಸಿದ ಕಾಫಿಯಲ್ಲಿನ ಕೆಫೀನ್ ಪ್ರಮಾಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA