ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚಾದ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ ಘೋಷಿಸಿದೆ.
ರಾಜ್ಯಕ್ಕೆ ಪ್ರವೇಶಿಸುವ ಪ್ರಯಾಣಿಕರ ಮೇಲೆ ಪೊಲೀಸರು ನಿಗಾ ಇರಿಸಿದ್ದು, ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಗಡಿ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಪ್ರತಿ ವಾಹನದ ವಿವರ ಪಡೆದುಕೊಂಡು ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗುತ್ತಿದೆ. ಅಲ್ಲದೆ, ನಿಫಾ ಬಗ್ಗೆ ಸಿಬ್ಬಂದಿ ಜಾಗೃತಿ ಮೂಡಿಸುತ್ತಿದ್ದಾರೆ.


