ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್ ಗೆ ವಿಧಿಸಲಾಗಿದ್ದ ಷರತ್ತು ಸಡಿಲಗೊಳಿಸಲಾಗಿದ್ದು, ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್ಆದೇಶ ಹೊರಡಿಸಿದೆ.
ಹೈಕೋರ್ಟ್ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಆದರೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶ ಹೊರಡಿಸಿದೆ.
ನನಗೆ ಕೇವಲ ರಾಜ್ಯದ ಹೊರಗೆ ಹೋಗುವುದಲ್ಲದೇ ವಿದೇಶಕ್ಕೆ ಹೋಗುವುದು ಅವಶ್ಯವಿದೆ ಎಂಬ ಹಲವು ಅಂಶಗಳನ್ನು ನಟ ದರ್ಶನ್ ನ್ಯಾಯಾಲಯದ ಮುಂದಿಟ್ಟಿದ್ದರು. ಇದೀಗ ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ ವಿದೇಶ ಪ್ರಯಾಣಕ್ಕೆ ಅವಕಾಶ ಕೋರಿ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


