ಕರ್ನಾಟಕ ಪೊಲೀಸ್ ಪ್ರಾಧಿಕಾರದ ಅಧ್ಯಕ್ಷ ಮತ್ತು ಇಬ್ಬರ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಎರಡು ವಾರ ಗಡುವು ನೀಡಿರುವ ಹೈಕೋರ್ಟ್, ‘ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮುಂದಿನ ವಿಚಾರಣೆಗೆ ಖುದ್ದು ಹಾಜರಾಗಬೇಕು’ ಎಂದು ನಿರ್ದೇಶನ ನೀಡಿದೆ.
ಈ ಕುರಿತಂತೆ ವಕೀಲರಾದ ಸುಧಾ ಕಾಟಾ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು, ‘ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಎರಡು ವಾರಗಳ ಕಾಲಾವಕಾಶ ನೀಡಲಾಗುತ್ತಿದ್ದು, ಒಂದೊಮ್ಮೆ ಈ ಅವಧಿಯಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೆ ಅಥವಾ ಬಾಕಿ ಉಳಿದರೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿಚಾರಣೆಗೆ ಖುದ್ದಾಗಿ ಹಾಜರಾಗಿ ವಿವರಣೆ ನೀಡಬೇಕು’ ಎಂದು ತಾಕೀತು ಮಾಡಿ ವಿಚಾರಣೆ ಮುಂದೂಡಿತು. ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಲು ಕೊನೆಯ ಅವಕಾಶವಾಗಿ ಮೂರು ವಾರಗಳ ಕಾಲಾವಕಾಶ ನೀಡಿ ಹೈಕೋರ್ಟ್ 2023ರ ಜೂನ್ 21ರಂದು ಆದೇಶಿಸಿತ್ತು. ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದ ಮಂಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


