ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಆ ಮೂಲಕ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಸೂಚಿಸಿದೆ. ಸಿಎಂ ಎತ್ತಿದ ಎಲ್ಲಾ ಕಾನೂನಿನ ಅಂಶಗಳನ್ನು ಕೋರ್ಟ್ ತಳ್ಳಿ ಹಾಕಿದೆ. ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರು ಪಾಲುದಾರರಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸರಿಯಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಈ ನಡುವೆ ಸಿಎಂ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ. ಇತ್ತ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತು ಅಬ್ರಹಾಂ ಕೂಡಾ ಜನಪ್ರತಿನಿಧಿಗಳ ಕೋರ್ಟ್ ಗೆ ದೂರು ನೀಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296