ತುಮಕೂರು: ನಗರದಿಂದ ಮೈದಾಳ, ಮಾದಗೊಂಡನಹಳ್ಳಿ ಮಾರ್ಗವಾಗಿ ಊರ್ಡಿಗೆರೆಯವರೆಗೂ ಸಂಚರಿಸುವ ಗ್ರಾಮೀಣ ಸಾರಿಗೆ ಬಸ್ ಸರಿಯಾದ ಸಮಯಕ್ಕೆ ಸಂಚರಿಸುತ್ತಿಲ್ಲ, ಈ ಬಗ್ಗೆ ಕ್ರಮವಹಿಸುವಂತೆ ಕೆಎಸ್ ಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಹೈಕೋರ್ಟ್ ವಕೀಲರಾದ ರಮೇಶ್ ನಾಯಕ್ ಎಲ್. ಮನವಿ ಮಾಡಿದ್ದಾರೆ.
ಈ ಮಾರ್ಗದಲ್ಲಿ ಹಲವಾರು ದಶಕಗಳಿಂದ ಐದು ಟ್ರಿಪ್ ಬಸ್ ವ್ಯವಸ್ಥೆ ಇದ್ದು, ಬೆಳಗ್ಗೆ 8:15, 10 ಗಂಟೆ ಹಾಗೂ ಮಧ್ಯಾಹ್ನ 2 ಗಂಟೆ, ಸಂಜೆ 5 ಗಂಟೆ ಹಾಗೂ ರಾತ್ರಿ 8 ಗಂಟೆಯ ಬಸ್ ಗಳು ಸರಿಯಾದ ಸಮಯಕ್ಕೆ ಸಂಚರಿಸುತ್ತಿಲ್ಲ. ಇದರಿಂದಾಗಿ ಈ ಮಾರ್ಗದ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ಬಡ ಜನರಿಗೆ ತೊಂದರೆಯಾಗುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಬೆಳಗ್ಗೆ 7 ಗಂಟೆ, 8:15 ಗಂಟೆ, 10 ಗಂಟೆ, ಮಧ್ಯಾಹ್ನ 2 ಗಂಟೆ, ಸಂಜೆ 5 ಗಂಟೆ, ರಾತ್ರಿ 7 ಗಂಟೆ ಪ್ರತಿ ದಿನ ಈ ಸಮಯದಲ್ಲಿ ತುಮಕೂರಿನಿಂದ ಹೊರಟು ಮೈದಾಳ ಮಾರ್ಗವಾಗಿ ಊರ್ಡಿಗೆರೆಯಿಂದ ವಾಪಸ್ ತುಮಕೂರಿಗೆ ಬರುವಂತೆ ಸಾರಿಗೆ ವ್ಯವಸ್ಥೆ ಮಾಡುವಂತೆ ರಮೇಶ್ ನಾಯಕ್ ಎಲ್. ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


