ಪಿಎಚ್‌ಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಆದಿ ಮಂಜುನಾಥ್ ಎಂಬುವರು ಸೇರಿದಂತೆ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕ ಸದಸ್ಯಪೀಠ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಲವು ಕೇಂದ್ರಗಳಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ. ಪರೀಕ್ಷಾರ್ಥಿಗಳ ಗುರುತಿನ ಚೀಟಿ ಪರಿಶೀಲಿಸದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಕೆಲವು ವಿದ್ಯಾರ್ಥಿಗಳು ಮೊಬೈಲ್ ಅನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ದಿದ್ದಾರೆ. ಮೊಬೈಲ್ ನಲ್ಲಿ ರಾಜಾರೋಷವಾಗಿ ಉತ್ತರಗಳನ್ನು ಹುಡುಕಿ ಬರೆದಿದ್ದಾರೆ. ಜತೆಗೆ ಈಗಾಗಲೇ ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳೂ ಸಹ ಪರೀಕ್ಷಾ ಕೇಂದ್ರಗಳೊಳಗೆ ತೆರಳಿ ಅಕ್ರಮಿಗಳಿಗೆ ಸಹಾಯ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


