nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟ ದರ್ಶನ್‍ ಗೆ ಹೈಕೋರ್ಟ್ ಮಧ್ಯಾಂತರ ಜಾಮೀನು ಆದೇಶ:  ಅಭಿಮಾನಿಗಳಲ್ಲಿ ಸಂತಸ
    ಕೊರಟಗೆರೆ October 30, 2024

    ನಟ ದರ್ಶನ್‍ ಗೆ ಹೈಕೋರ್ಟ್ ಮಧ್ಯಾಂತರ ಜಾಮೀನು ಆದೇಶ:  ಅಭಿಮಾನಿಗಳಲ್ಲಿ ಸಂತಸ

    By adminOctober 30, 2024No Comments2 Mins Read
    koratagere

    ಕೊರಟಗೆರೆ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸದಲ್ಲಿದ್ದ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಕಾರಣ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರ ಹಿರಿಯ ವಕೀಲ ಸಿ.ವಿನಾಗೇಶ್ ಮಧ್ಯಾಂತರ ಜಾಮೀನಿಗೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಬುಧವಾರ ಬೆ.10:30ಕ್ಕೆ ಉಚ್ಚ ನ್ಯಾಯಾಲಯ 6ವಾರಗಳ ಮಧ್ಯಾಂತರ ಜಾಮೀನು ನೀಡಿದ ಬೆನ್ನಲ್ಲೆ ಇಲ್ಲಿನ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ನ್ಯಾಯಾಲಯಕ್ಕೆ ಕೃತಜ್ಞತೆ ತಿಳಿಸಿದ್ದಾರೆ.

    ಅಡವಿ ಸಿನಿಮಾದ ನಿರ್ಮಾಪಕ ಟೈಗರ್ ನಾಗರಾಜ್ ಮಾತನಾಡಿ, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್‍ ರವರು ಕನ್ನಡ ಚಿತ್ರರಂಗದಲ್ಲಿ ಸಿನಿಮಾದ ಮುಖಾಂತರ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದರೆ ಇತ್ತೀಚಿಗೆ ಕಳೆದ ಕೆಲವು ತಿಂಗಳ ಹಿಂದೆ ಕೊಲೆ ಪ್ರಕರಣದಲ್ಲಿ ಸೆರೆಮನೆ ವಾಸದಲ್ಲಿದ್ದ ವೇಳೆ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡ ಕಾರಣ ಹೈಕೋರ್ಟ್ ನ್ಯಾಯಧೀಶರು ವೈದ್ಯಕೀಯ ವರದಿಯನ್ನು ಗಮನಿಸಿ ದರ್ಶನ್  ಅವರಿಗೆ 6 ವಾರಗಳವೆರೆಗೆ ಮಧ್ಯಾಂತರ ಜಾಮೀನು ನೀಡಿ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ದರ್ಶನ್  ಆರೋಗ್ಯ ಸಮಸ್ಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದರು.

    ದರ್ಶನ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ದೇವರಾಜ್ ಕೆ.ಎನ್. ಮಾತನಾಡಿ, ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳನ್ನೇ ನನ್ನ ಸೆಲೆಬ್ರೆಟಿಸ್ ಎಂದ ಏಕೈಕ ನಟ ದರ್ಶನ್‍ ರವರು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸ ಅನುಭವಿಸುತ್ತಿದ್ದ ದರ್ಶನ್ ಅಣ್ಣನವರಿಗೆ ಬೆನ್ನು ನೋವು ಕಾಣಿಸಿಕೊಂಡ ಕಾರಣ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ವೈದ್ಯಕೀಯ ವರದಿಯಂತೆ ಶಸ್ತ್ರಚಿಕಿತ್ಸೆಗಾಗಿ 6 ವಾರಗಳ ಮಧ್ಯಾಂತರ ಜಾಮೀನು ನೀಡಿದ್ದು ಅಭಿಮಾನಿಗಳಿಗೆ ಖುಷಿಯನ್ನು ಉಂಟು ಮಾಡಿದೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಅಭಿಮಾನಿಗಳ ಪರವಾಗಿ ಕೃತಜ್ಞತೆ ತಿಳಿಸಲು ಬಯಸುತ್ತೇವೆ. ಆದಷ್ಟು ಬೇಗ ಆರೋಗ್ಯದಲ್ಲಿ ಚೇತರಿಕೆ ಕಾಣಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುವುದಾಗಿ ತಿಳಿಸಿದರು.

    ಪ.ಪಂ ಸದಸ್ಯ ಕೆ.ಎನ್. ನಟರಾಜು ಮಾತನಾಡಿ, ಅಭಿಮಾನಿಗಳ ಪ್ರೀತಿಯ ದಾಸ ದರ್ಶನ್ ಸಂಕಷ್ಟದಲ್ಲಿದ್ದ ಸಾಕಷ್ಟು ಬಡ ಕುಟುಂಬಗಳಿಗೆ, ಅನಾಥಶ್ರಮ, ವೃದ್ಧಾಶ್ರಮ, ಮಠಾಮಾನ್ಯಗಳಿಗೆ ಸಹಾಯ ಮಾಡಿದ್ದಾರೆ. ಪ್ರತಿಯೊಬ್ಬ ಮನುಷ್ಯನು ತಪ್ಪು ಮಾಡುವುದು ಸಹಜ. ಹೈಕೋರ್ಟ್ ನೀಡಿರುವ ಮಧ್ಯಾಂತರ ಜಾಮೀನು ತೀರ್ಪು ಸ್ವಾಗತರ್ಹ, ಬೆನ್ನು ನೋವಿನ ಸಮಸ್ಯೆಯಿಂದ ಆದಷ್ಟು ಬೇಗ ಗುಣಮುಖರಾಗಿ ಕೊಲೆ ಪ್ರಕರಣದ ಆರೋಪದಿಂದ ಹೊರಬರಲಿ ಎಂದು ಹೇಳಿದರು.

    ಈ ಸಂದರ್ಭದಲ್ಲಿ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಭೀಮರಾಜು, ಉಪಾಧ್ಯಕ್ಷ ದರ್ಶನ್, ದೀಪು, ಚಿರಂಜೀವಿ, ಜನಾರ್ಧನ್, ಲಿಂಗರಾಜು, ಶಿವರಾಜು, ಮಾರುತಿ, ನವೀನ್, ಅಂಬಿ, ಮನು, ನಂದನ್, ದರ್ಶನ್, ರೋಹಿತ್, ವಿಜಯ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ   


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

     


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.