ಬೆಂಗಳೂರು: ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ.
ಮಾನನಷ್ಟ ಮೊಕದ್ದಮೆಯ ಕಾನೂನುಬದ್ಧತೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ ಮತ್ತು ಬಿಜೆಪಿಗೆ ತುರ್ತು ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ನೀಡಿದ್ದ ಸಮನ್ಸ್‌ಗೆ ಪ್ರತಿಯಾಗಿ 2024ರ ಜೂನ್ 7ರಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಮುಂದೆ ಖುದ್ದು ಹಾಜರಾಗಿದ್ದರು ಮತ್ತು ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx