ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ – 2023ರ ಮಹೋತ್ಸವ ಆಚರಿಸುವ ಸಂಬಂಧ, ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವ ಆಚರಣಾ ಸಮಿತಿಯ ಉನ್ನತಮಟ್ಟದ ಪೂರ್ವಭಾವಿ ಸಭೆ ನಡೆಯಿತು.
ಪ್ರತಿ ವರ್ಷವೂ ರಾಜ್ಯ ಸರ್ಕಾರದಿಂದ ನಾಡಹಬ್ಬ ದಸರಾ ಮಹೋತ್ಸವ ಆಚರಿಸಲಾಗುತ್ತಿದೆ. ಈ ಬಾರಿಯೂ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ದಸರಾ ಮಹೋತ್ಸವ ಆಚರಿಸುವ ಕುರಿತಾಗಿ ಸಭೆಯಲ್ಲಿ ನಿರ್ಧರಿಸಲಾಯಿತು.
ಇದೇ ಅಕ್ಟೋಬರ್ 15ರಂದು ಬೆಳಗ್ಗೆ 10.15ರಿಂದ 10. 30ರ ಅವಧಿಯಲ್ಲಿ ದಸರಾವನ್ನು ಉದ್ಘಾಟನೆ ಮಾಡಲಾಗುತ್ತದೆ. ದಸರಾ ಮಹೋತ್ಸವ ವೇಳೆ ದೀಪಾಲಂಕಾರ, ಮೆರವಣಿಗೆ, ಜಂಬೂಸವಾರಿ, ಸ್ಥಬ್ಧ ಚಿತ್ರಗಳ ಮೆರವಣಿಗೆ ಜನರನ್ನು ಬಹಳ ಆಕರ್ಷಿಸುತ್ತವೆ.
ಈ ಬಾರಿ ಸ್ಥಬ್ದ ಚಿತ್ರಗಳ ಮೆರವಣಿಗೆಯಲ್ಲಿ ರಾಜ್ಯದ ಪರಂಪರೆ, ಜಿಲ್ಲೆಗಳ ವಿಶೇಷತೆಗಳು, ನಮ್ಮ 5 ಗ್ಯಾರಂಟಿಗಳ ಬಗ್ಗೆ ಜನತೆಗೆ ಮಾಹಿತಿ ತಿಳಿಸುವ ಅಂಶಗಳು ಇರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವ ಅಂಶಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


