nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗಾ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಟಿ. ಅನಿಲ್ ಕುಮಾರ್
    ತುಮಕೂರು October 30, 2024

    ನರೇಗಾ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ: ಕೆ.ಟಿ. ಅನಿಲ್ ಕುಮಾರ್

    By adminOctober 30, 2024No Comments2 Mins Read
    narega

    ತುಮಕೂರು: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ.ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಹೊರವಲಯದ ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಯೋಜನೆ ಮುಖ್ಯ ಪಾತ್ರವಹಿಸುತ್ತಿದ್ದು, ನರೇಗಾ ಕಾಮಗಾರಿಯಲ್ಲಿ ತೊಡಗಿದ ಕೂಲಿಕಾರ್ಮಿಕರಿಗೆ ಸಕಾಲಕ್ಕೆ ಕೂಲಿ ಪಾವತಿಸಿ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.


    Provided by
    Provided by

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ದೃಷ್ಟಿಕೋನದಿಂದ ಗ್ರಾಮ ಪಂಚಾಯಿತಿ ಸಮಗ್ರ ದರ್ಶನ ಎಂಬ ವಿಶೇಷ ಅಭಿಯಾನದ ಮೂಲಕ ಈಗಾಗಲೇ 196.52 ಕೋಟಿ ರೂ.ವೆಚ್ಚದಲ್ಲಿ ಚರಂಡಿ, ರಸ್ತೆ, ಗ್ರಾಮ ಪಂಚಾಯಿತಿ ಕಟ್ಟಡ, ಸಂಜೀವಿನಿ ಭವನ, ಗ್ರಾಮೀಣ ಗೋದಾಮು, ಶಾಲಾ ಆವರಣ ಗೋಡೆ, ಶೌಚಾಲಯ, ಆಟದ ಮೈದಾನ ಅಂಗನವಾಡಿ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ 1161 ಶಾಲಾ ಕಾಂಪೌಂಡ್, 874 ಶೌಚಾಲಯ, 945 ಆಟದ ಮೈದಾನ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

    ನೈಜವಾಗಿ ಕೆಲಸ ಮಾಡುತ್ತಿರುವ ನರೇಗಾ ಕಾರ್ಮಿಕರಿಗೆ ಕೆಲವು ತೊಡಕುಗಳು ಉಂಟಾಗುತ್ತಿರುವ ಬಗ್ಗೆ ಮತ್ತು ನರೇಗಾ ಯೋಜನೆ ಅನುಷ್ಠಾನದಲ್ಲಿ ಎದುರಾಗುವ ಸಮಸ್ಯೆಗಳ ಕುರಿತು ಹೆಚ್ಚುವರಿ ಕಾರ್ಯದರ್ಶಿಗಳಿಗೆ ತಿಳಿಸಿದರು.
    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಮೂಲಕ ಕಂಪ್ಯೂಟರ್ ತರಬೇತಿ, ಛಾಯಾಚಿತ್ರೀಕರಣ, ಚಿಪ್ಸ್ ತಯಾರಿಕೆ, ಟೈಲರಿಂಗ್, ಮೊಬೈಲ್ ರಿಪೇರಿ, ಅಗರಬತ್ತಿ ತಯಾರಿಕೆ ಸೇರಿದಂತೆ ಸ್ವಯಂ ಉದ್ಯೋಗ ಕೈಗೊಳ್ಳಲು 509 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿದೆ ಎಂದು ತರಬೇತಿ ಸಂಸ್ಥೆಯ ನಿರ್ದೇಶಕ ವಾದಿರಾಜ್ ಸಭೆಗೆ ಮಾಹಿತಿ ನೀಡಿದರು.

    ನಂತರ ಕೊರಟಗೆರೆ ತಾಲೂಕು ನೀಲಗೊಂಡನಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿರುವ ಕಾವೇರಿ ಸಂಜೀವಿನಿ ಒಕ್ಕೂಟದ ಮಹಿಳೆಯರೊಂದಿಗೆ ಸ್ವಯಂ ಉದ್ಯೋಗ ಸ್ಥಾಪನೆಯ ಗುರಿ ಮತ್ತು ಸವಾಲುಗಳ ಕುರಿತು ಚರ್ಚಿಸಿ ಸಂಜೀವಿನಿ ಸಂಘದ ವತಿಯಿಂದ ಸ್ಥಾಪಿಸಲಾದ ಹಪ್ಪಳ ಉತ್ಪಾದನೆ ತಯಾರಿಕಾ ಯಂತ್ರವನ್ನು ವೀಕ್ಷಿಸಿದರಲ್ಲದೆ, ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಭೋಜನಾಲಯ, ವಾಲಿಬಾಲ್ ಆಟದ ಮೈದಾನ, ಸಂಜೀವಿನಿ ಕಟ್ಟಡಗಳನ್ನು ವೀಕ್ಷಿಸಿದ ಅವರು, ಸಂಜೀವಿನಿ ಮಾಸಿಕ ಸಂತೆಗೆ ಭೇಟಿ ನೀಡಿ ಸಂಜೀವಿನಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುತ್ತಿರುವ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದರು.
    ನಂತರ ಮಧುಗಿರಿ ತಾಲೂಕು ಗರಣಿ ಗ್ರಾಮ ಪಂಚಾಯಿತಿಯ ಪುಲಮಾಚಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಶಾಲಾ ಕಾಂಪೌಂಡ್ ಮತ್ತು ಶೌಚಾಲಯ ಕಾಮಗಾರಿ ವೀಕ್ಷಿಸಿದರು.

    ಈ ಸಂದರ್ಭದಲ್ಲಿ ಎನ್‌ಆರ್‌ಎಲ್‌ಎಂ ಅಭಿಯಾನ ನಿರ್ದೇಶಕರಾದ ವಿದ್ಯಾ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತ ಪವನ್ ಕುಮಾರ್ ಮಾಲಪಾಟಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶೈಲ ದಿಡ್ಡಿಮನಿ, ನರೇಗಾ ರಾಜ್ಯ ಸಂಯೋಜಕ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಭಿವೃದ್ಧಿ, ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕರು, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.