nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    • ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ
    • ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ
    • ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ: ಮುಂಜಾಗ್ರತೆವಹಿಸಲು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ
    ತುಮಕೂರು March 28, 2025

    ತುಮಕೂರು ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ: ಮುಂಜಾಗ್ರತೆವಹಿಸಲು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ

    By adminMarch 28, 2025No Comments2 Mins Read
    shubha kalyan

    ತುಮಕೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಇದರಿಂದ ಬಿಸಿ ಶಾಖದ ಅಲೆಯಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಸಲಹೆ ನೀಡಲಾಗಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.

    ಸಾರ್ವಜನಿಕರು ರೇಡಿಯೋ, ಟಿ.ವಿ., ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳಬೇಕು. ಬಾಯಾರಿಕೆಯಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು.


    Provided by
    Provided by

    ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ. ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ ತಮ್ಮೊಂದಿಗೆ ನೀರನ್ನು ತೆಗೆದುಕೊಂಡು ಹೋಗಬೇಕು.

    ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿಯನ್ನು ಬಳಸಬೇಕು. ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಬೇಕು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ಹಣ್ಣಿನ ಶರಬತ್, ಮಜ್ಜಿಗೆ ಇತ್ಯಾದಿಗಳನ್ನು ಬಳಸುವುದರಿಂದ ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ.
    ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿರಿಸಿ ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಬೇಕು. ಆದಷ್ಟು ಫ್ಯಾನುಗಳನ್ನು ಬಳಸಬೇಕು. ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡಬೇಕು.

    ಮಾಲೀಕರು ಕೆಲಸದ ಸ್ಥಳದಲ್ಲಿ ತಂಪಾದ ಕುಡಿಯುವ ನೀರನ್ನು ಒದಗಿಸಬೇಕು. ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು. ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಆನಾನಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.

    ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಭಿಣಿಯರು ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿರುವವರು ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಚ್ಚು ಜಾಗರೂಕತೆ ವಹಿಸಬೇಕು.

    ಮಕ್ಕಳು ಹಾಗೂ ಸಾಕು ಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಬೇಕು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ಹಾಗೂ ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಬೇಕು.

    ಬಿಸಿಲಿನ ಸಮಯದಲ್ಲಿ ಅಡುಗೆ ಮಾಡಬಾರದು. ಅಡುಗೆ ಪ್ರದೇಶಗಳಲ್ಲಿ ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬಾರದು. ಇಂತಹ ಪಾನೀಯಗಳು ಹೊಟ್ಟೆ ನೋವನ್ನು ಉಂಟು ಮಾಡುತ್ತವೆ.
    ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ತುಮಕೂರು: ಜೂನ್ 26 ರಿಂದ ಪುಸ್ತಕ ಸಂತೆ

    June 14, 2026

    ರುಡ್‌ ಸೆಟ್ ಸಂಸ್ಥೆ: ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

    June 14, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ

    June 14, 2026

    ಸಿರಾ: ನಗರದ ಶ್ರೀ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಜನಜಾಗೃತಿ ವೇದಿಕೆ ಟ್ರಸ್ಟ್, ರಾಜ್ಯ ಮದ್ಯಪಾನ…

    ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ

    June 14, 2026

    ತುಮಕೂರು: ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 14, 2026

    ಸಿದ್ದರಬೆಟ್ಟ: ಜೂನ್ 21ರಂದು ಉಚಿತ ಸಾಮೂಹಿಕ ವಿವಾಹ, ಜನ ಜಾಗೃತಿ ಧರ್ಮ ಸಮಾರಂಭ, ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ

    June 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.