ಯಾದಗಿರಿ: ರಾಜ್ಯದಲ್ಲೇ ಯಾದಗಿರಿಯಲ್ಲಿ ಅತ್ಯಧಿಕ ಬಿಸಿಲು ದಾಖಲೆಯಾಗಿದೆ. ಕಳೆದೊಂದು ವಾರದಿಂದ 45.6 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ದಾಖಲಾಗಿದೆ. ಬಿಸಿಲಿನ ಪ್ರಖರತೆಗೆ ನವಜಾತ ಶಿಶುಗಳು ಅಸ್ವಸ್ಥರಾಗಿದ್ದಾರೆ. ನಿರ್ಜಲೀಕರಣಕ್ಕೆ ಒಳಗಾಗಿ ನವಜಾತ ಶಿಶುಗಳನ್ನು ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.
ನಿತ್ಯವೂ ಯಾದಗಿರಿಯ ತಾಯಿ-ಮಕ್ಕಳ ಆಸ್ಪತ್ರೆಗೆ ಹತ್ತಾರು ಮಕ್ಕಳನ್ನು ದಾಖಲಿಸಲಾಗಿತ್ತಿದೆ. ಕಳೆದ 5-6 ದಿನದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬಿಸಿಲಿಗೆ ಮಕ್ಕಳ ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುತ್ತಿದೆ. ಮಾತ್ರವಲ್ಲ ನೀರಿನ ಅಂಶ ಕಡಿಮೆಯಾಗಿ ಮಕ್ಕಳಿಗೆ ಕಿಡ್ನಿ ವೈಫಲ್ಯವೂ ಆಗುತ್ತಿದೆ. 1 ವರ್ಷದಿಂದ 7 ವರ್ಷದೊಳಗಿನ ಮಕ್ಕಳ ಮೇಲೆ ನೇರ ಪರಿಣಾಮ ಬೀರುತ್ತಿದೆ.
ಆಸ್ಪತ್ರೆಯಲ್ಲಿ ಮಕ್ಕಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಯವರೆಗೆ 26 ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ಅದರಲ್ಲಿ 15 ಶಿಶುಗಳು ಗುಣಮುಖರಾಗಿದ್ದಾರೆ. ಇನ್ನು ಕೆಲವು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಯಂದಿರು ಮಕ್ಕಳನ್ನು ವಿಶೇಷವಾಗಿ ಆರೈಸಿದರೇ ಬೇಗ ಗುಣಮುಖರಾಗುತ್ತಾರೆ ಎಂದು ವೈದ್ಯೆ ಸಾವಿತ್ರಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


