ಚಿಕ್ಕಮಗಳೂರು: ಶಾಲೆ- ಕಾಲೇಜುಗಳಲ್ಲಿ ಹೆಚ್ಚಾಗುತ್ತಿರುವ ಹಿಜಾಬ್, ಕೇಸರಿ ಶಾಲು ಸಮರ ಬಳಿಕ ನೀಲಿ ಶಾಲು ಎಂಟ್ರಿ ಕೊಟ್ಟ ಘಟನೆ ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ಸಂಹಿತೆ ಪಾಲಿಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಇಂದು ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದಾರೆ. ಹಾಗೂ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದಾರೆ. ಇದರಿಂದ ಕಾಲೇಜು ಆಡಳಿತ ಮಂಡಳಿಗೆ ತಲೆ ನೋವಾಗಿದ್ದು ಮುಂದೆ ಏನು ಎಂಬ ಭಯದಲ್ಲಿ ಕುಳಿತಿದ್ದಾರೆ. ಸದ್ಯ ಕೆಲ ಕಾಲೇಜುಗಳಲ್ಲಿ ರಜೆ ಘೋಷಿಸಲಾಗಿದೆ.
ಕೆಲವು ಕಡೆ ವಿದ್ಯಾರ್ಥಿಗಳಿಗೆ ಕ್ಲಾಸ್ ರೂಂ ಪ್ರವೇಶಕ್ಕೆ ತಡೆ ಹಿಡಿಯಲಾಗಿದೆ. ಮತ್ತೇ ಕೆಲವು ಕಡೆ ಕಾಲೇಜುಗಳ ಮುಂದೆ ವಿದ್ಯಾರ್ಥಿಗಳು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಾರೆ. ಈ ಘಟನೆಯ ನಡುವೆ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಹಿಜಾಬ್ ತೆಗೆಸಬಾರದೆಂದು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಧರಣಿ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು ನಗರದ ಐಡಿಎಸ್ ಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದಾರೆ. ವಿದ್ಯಾರ್ಥಿನಿಯರು ರಾಜ್ಯ ಸರ್ಕಾರದ ಆದೇಶ ಧಿಕ್ಕರಿಸಿದ್ದಾರೆ. ಆದರೆ ಇಲ್ಲಿ ಹಿಜಾಬ್ ಧರಿಸಿ ಬಂದರೂ ಕಾಲೇಜು ಆಡಳಿತ ಮಂಡಳಿ ಸುಮ್ಮನಿದೆ. ಹಾಗೂ ಸಮವಸ್ತ್ರ ಧರಿಸದೆ ಬಂದ ವಿದ್ಯಾರ್ಥಿಗಳಿಗೆ ಗೇಟ್‌ಪಾಸ್ ನೀಡಲಾಗುತ್ತಿದೆ. ಹೀಗಾಗಿ ಕಾಲೇಜಿನ ದ್ವಂದ್ವ ನೀತಿಗೆ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB