ಬೆಂಗಳೂರು ನಗರದ ಕಾನೂನು ಕಾಲೇಜೊಂದರ ವಿದ್ಯಾರ್ಥಿ ಆರ್ಯಕುಮಾರ್ ನಡ್ಡಾ (23) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಮಾಚಲ ಪ್ರದೇಶದ ಆರ್ಯಕುಮಾರ್, ವ್ಯಾಸಂಗಕ್ಕೆಂದು ನಗರಕ್ಕೆ ಬಂದಿದ್ದರು. ಎಲ್. ಎಲ್. ಬಿ ಮೂರನೇ ವರ್ಷದ ವಿದ್ಯಾರ್ಥಿಯಾಗಿದ್ದರು ಎಂದು ಪೊಲೀಸರು ಹೇಳಿದರು.
‘ಶ್ರೀಗಂಧಕಾವಲು ಡಿ ಗ್ರೂಪ್ ಬಡಾವಣೆಯ ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ (ಪಿ. ಜಿ) ಆರ್ಯಕುಮಾರ್ ವಾಸವಿದ್ದರು. ಭಾನುವಾರ ಬೆಳಿಗ್ಗೆ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹ ನೋಡಿದ್ದ ಪಿ. ಜಿ ಸಿಬ್ಬಂದಿ ಠಾಣೆಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


