ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸಲು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತ್ ಸರ್ಕಾರಿ ನೌಕರ ರಾಹುಲ್ ಭಟ್ ಹತ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ನಮ್ಮ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ಸೃಷ್ಟಿಸಲಾಗಿತ್ತು. ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವೆ.
2016ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದರು. ಅಲ್ಲದೆ, ಕಾಶ್ಮೀರ ಫೈಲ್ಸ್ ಚಲನಚಿತ್ರವು ಹಿಂಸಾಚಾರವನ್ನು ಪ್ರಚೋದಿಸಿದೆ ಎಂದ ಅವರು, ಕೇಂದ್ರ ಸರ್ಕಾರ ನಮ್ಮ ಎಲ್ಲಾ ಮಸೀದಿಗಳ ಹಿಂದೆ ಬಿದ್ದಿದ್ದಾರೆ. ಕೇಂದ್ರ ಸರ್ಕಾರವು ನೈಜ ವಿಷಯಗಳಿಂದ ವಿಚಲಿತರಾಗಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ಈಗ ಜ್ಞಾನವಾಪಿ ಮಸೀದಿಯ ಹಿಂದೆ ಇದ್ದಾರೆ ಎಂದು ಹೇಳಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5