ಬೆಳಗಾವಿ: ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ನೇತೃತ್ವದ ಪೊಲೀಸರ ತಂಡ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ಶನಿವಾರ ದಾಳಿ ನಡೆಸಿದ್ದು, ಜೈಲು ನಿಯಮದ ಪ್ರಕಾರ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆದುಕೊಂಡರು.
260 ಪೊಲೀಸರು ದಾಳಿ ಏಕ ಕಾಲದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಜೈಲಿನ ಒಳಗೆ ತಂಬಾಕು ಪಾಕೇಟ್, ಸಿಗರೇಟ್, ಮೂರು ಚಾಕುಗಳು, ಸ್ಮಾಲ್ ಹೀಟರ್ ವೈರ್ ಬಂಡಲ್, ಎಲೆಕ್ಟ್ರಿಕಲ್ ಒಲೆ ಸೇರಿ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಪತ್ತೆಯಾದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದರು.
ನಸುಕಿನ ಜಾವ 5 ಗಂಟೆಗೆ ತಂಡದೊಂದಿಗೆ ಆಗಮಿಸಿದ ಕಮಿಷನರ್ ಸಂಪೂರ್ಣ ಪರಿಶೀಲನೆ ನಡೆಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರೋಹನ್ ಜಗದೀಶ್ ಮುಂದಾಳತ್ವದಲ್ಲಿ ಗಂಟೆಗಟ್ಟಲೇ ಪರಿಶೀಲನೆ ನಡೆಸಿದ ಪೊಲೀಸರು ಮೆಟಲ್ ಡಿಟೆಕ್ಟರ್, ಶ್ವಾನದಳಗಳ ಮೂಲಕ ತಪಾಸಣೆ ನಡೆಸಿದರು.
ಜೈಲಿನಲ್ಲಿ ನಿಷೇಧಿತ ಅಕ್ರಮ ವಸ್ತುಗಳ ಬಳಕೆ ಬಗ್ಗೆ ದೂರುಗಳು ಬಂದ ಹಿನ್ನೆಲೆ ಜೈಲಿನ ಮೇಲೆ ದಾಳಿ ನಡೆಸಿರುವುದಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರಲ್ಲದೇ ಅಕ್ರಮ ವಸ್ತುಗಳು ಹೇಗೆ ಜೈಲಿನೊಳಗೆ ಬಂದವು ಎನ್ನುವುದರ ಬಗ್ಗೆ ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


