ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಮಾಡಿರುವುದು ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿ ಎಂದು ತಿಳಿದುಬಂದಿದೆ. ಹೀಗಾಗಿ ಮಹಾರಾಷ್ಟ್ರದ ಪೊಲೀಸರು ಜೈಲಿಗೆ ಆಗಮಿಸಿ ಆರೋಪಿ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ಕುರಿತು ಸಂಬಂಧ ಕೇಂದ್ರ ಸಚಿವ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರ ಪೊಲೀಸರ ಗಮನಕ್ಕೆ ತಂದಿದ್ದರು. ಹೀಗಾಗಿ ಆರೋಪಿ ಶೋಧಕ್ಕೆ ಪೊಲೀಸರು ಹಿಂಡಲಗಾ ಜೈಲಿಗೆ ಬಂದಿದ್ದಾರೆ.
ನಾಗ್ಪುರ ಪೊಲೀಸರಿಗೆ ಕೊಲ್ಹಾಪುರ, ಸಾಂಗ್ಲಿ, ಬೆಳಗಾವಿ ನಗರ ಪೊಲೀಸರು ಸಾಥ್ ನೀಡಿದ್ದಾರೆ. ಶನಿವಾರ ಸಂಜೆ ಮೂರು ಗಂಟೆಗಳ ಕಾಲ ಜೈಲಿನಲ್ಲಿ ಶೋಧ ಕಾರ್ಯ ನಡೆಸಿರುವ ಪೊಲೀಸರು, ಭಾನುವಾರವೂ ಜೈಲಿನಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


