nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    • ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್
    • ತುಮಕೂರು: ವಿವಿಧ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
    • ಹಾಸನ: ಮುಸುಕಿನ ಜೋಳಕ್ಕೆ ‘ಬಿಳಿಸುಳಿ’ ರೋಗ ಬಾಧೆ: 7 ತಾಲೂಕು ಬರಪೀಡಿತ ಎಂದು ಘೋಷಿಸಿ: ಸಿಎಂಗೆ ಸಚಿವ ಶಿವಲಿಂಗೇಗೌಡ ಮನವಿ
    • ಹೆಡಗಾಪೂರದಲ್ಲಿ ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ: ಕೂಲಿಕಾರ್ಮಿಕರಿಗೆ ಹಳ್ಳಿಯಲ್ಲೇ ಸಿಗಲಿದೆ ಹೆಚ್ಚಿನ ಉದ್ಯೋಗಾವಕಾಶ
    • ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ
    ರಾಜ್ಯ ಸುದ್ದಿ March 29, 2026

    ಕರ್ನಾಟಕದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ; SSLC ಒಟ್ಟು ಅಂಕಗಳಲ್ಲಿ ಕಡಿತ: ಸಿಎಂ ಸಿದ್ದರಾಮಯ್ಯ ಘೋಷಣೆ

    By adminMarch 29, 2026No Comments1 Min Read
    siddaramaiah

    ಮೈಸೂರು: ರಾಜ್ಯದ ಶಾಲಾ ಶಿಕ್ಷಣದಲ್ಲಿ ಹಿಂದಿ ಭಾಷೆಯ ಹೇರಿಕೆಗೆ ತಡೆ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯನ್ನು ಕಡ್ಡಾಯಗೊಳಿಸದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

    “ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ. ಈಗಲೂ ಸಹ ಪರೀಕ್ಷೆಯಲ್ಲಿ ಹಿಂದಿ ಕಡ್ಡಾಯವಾಗಬಾರದು ಎಂಬುದು ನಮ್ಮ ನಿಲುವು. ನಾನು ಹಿಂದಿ ಕಲಿಯಬಾರದು ಎಂದು ಹೇಳುತ್ತಿಲ್ಲ, ಆದರೆ ಅದನ್ನು ಕನ್ನಡಿಗರ ಮೇಲೆ ಕಡ್ಡಾಯವಾಗಿ ಹೇರಬಾರದು” ಎಂದು ಸಿಎಂ ಸ್ಪಷ್ಟಪಡಿಸಿದರು.

    ಸರ್ಕಾರದ ಹೊಸ ತೀರ್ಮಾನದಂತೆ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯ ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಸಲಾಗಿದೆ. ಈ ವರ್ಷದಿಂದಲೇ ತೃತೀಯ ಭಾಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ನಿರ್ಧರಿಸಲಾಗಿದೆ.

    ಈ ಹೊಸ ನಿಯಮವು ಪ್ರಸಕ್ತ ಸಾಲಿನಿಂದಲೇ ಜಾರಿಗೆ ಬರಲಿದೆ. ಸರ್ಕಾರದ ಈ ನಿರ್ಧಾರವನ್ನು ಕೆಲವರು ವಿರೋಧಿಸಬಹುದು, ಆದರೆ ರಾಜ್ಯದ ಹಿತದೃಷ್ಟಿಯಿಂದ ಎಲ್ಲವನ್ನೂ ಪರಾಮರ್ಶಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸಲು ಸರ್ಕಾರ ಸಮರ ಸಾರಿದೆ. ಮೈಸೂರಿನಲ್ಲಿ ಪತ್ತೆಯಾಗಿರುವ ಡ್ರಗ್ಸ್ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    “ಸರ್ಕಾರದ ನಿರ್ಧಾರಕ್ಕೆ ಶೇ.100 ರಷ್ಟು ಬೆಂಬಲ ಸಿಗುವುದು ಕಷ್ಟ. ವಿರೋಧಿಸುವವರು ಇರುತ್ತಾರೆ, ಸ್ವಾಗತಿಸುವವರೂ ಇರುತ್ತಾರೆ. ಆದರೆ ನಾವು ಕನ್ನಡದ ಅಸ್ಮಿತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ತೀರ್ಮಾನ ಮಾಡಿದ್ದೇವೆ” ಎಂದು ಸಿದ್ದರಾಮಯ್ಯ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಈ ಬಾರಿ ಮೈಸೂರು ದಸರಾದಲ್ಲಿ ಕಂಬಳ ನಡೆಯುತ್ತದೆ: ಸಚಿವ ಡಾ. ಯತೀಂದ್ರ ಸ್ಪಷ್ಟನೆ

    August 26, 2026

    ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ

    August 25, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ

    August 27, 2026

    ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ…

    ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ

    August 27, 2026

    ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

    August 27, 2026

    ಈದ್ ಮಿಲಾದ್: ಮೆರವಣಿಗೆಯಲ್ಲಿ ಭಾಗಿಯಾಗಿ ಶುಭಕೋರಿದ ಹಾಸನ ಸಂಸದ ಶ್ರೇಯಸ್ ಪಟೇಲ್

    August 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.