ರಶ್ಮಿಕಾ ಮಂದಣ್ಣ ಪ್ರಸ್ತುತ ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗುತ್ತಿರುವ ವಾರಿಸು ಚಿತ್ರದಲ್ಲಿ ವಿಜಯ್ ಜೊತೆ ಕೆಲಸ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮುಂಚೂಣಿ ನಾಯಕಿಯಾಗಿ ಏರಿದ್ದಾರೆ. ತೆಲುಗಿನಲ್ಲಿ ಚಿತ್ರೀಕರಣಗೊಂಡು ಹಲವು ಭಾಷೆಗಳಿಗೆ ಡಬ್ ಆಗಿದ್ದ ಪುಷ್ಪಾ ಚಿತ್ರ ರಶ್ಮಿಕಾಗೆ ಟರ್ನಿಂಗ್ ಪಾಯಿಂಟ್ ಆಗಿತ್ತು.
ಸದ್ಯ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಸೀತಾರಾಮಂ ಚಿತ್ರದಲ್ಲಿ ರಶ್ಮಿಕಾ ಅಭಿನಯಕ್ಕೆ ಪ್ರಶಂಸೆಯೂ ಸಿಕ್ಕಿದೆ. ಹಿಂದಿಯಲ್ಲಿ ಅವರು ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಮಿಷನ್ ಮಜ್ನು, ಅಮಿತಾಬ್ ಬಚ್ಚನ್ ಅವರೊಂದಿಗೆ ಗುಡ್ ಬೈ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಅನಿಮಲ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಹೀಗಿರುವಾಗ ರಶ್ಮಿಕಾ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ. ಪುಷ್ಪ ಚಿತ್ರದಲ್ಲಿ ನಟಿಸಲು ಈಗಾಗಲೇ 1 ಕೋಟಿ ಸಂಭಾವನೆ ಪಡೆದಿದ್ದು, ಇದೀಗ ಪುಷ್ಪ 2 ಚಿತ್ರದಲ್ಲಿ ನಟಿಸಲು 4 ಕೋಟಿ ಕೇಳುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿರುವ ಕಾರಣಕ್ಕೆ ರಶ್ಮಿಕಾ ಮಂದಣ್ಣ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy