ತುಮಕೂರು: ಯಾವ ಕಾಲೇಜಿನಲ್ಲಿ ಮೊದಲಿನಿಂದಲೂ ಸಿಡಿಸಿ ಕಮಿಟಿಗಳು ಹಿಜಾಬ್ ಹಾಕಬೇಕು ಬೇಡ ಅಂತ ತೀರ್ಮಾನ ತೆಗೆದುಕೊಂಡಿದ್ದಾರೆ ಆ ಕಾಲೇಜುಗಳಿಗೆ ಕೋರ್ಟ್ ಆದೇಶ ಅನ್ವಯವಾಗುತ್ತದೆ ಎಂದು ತುಮಕೂರು ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ತಿಳಿಸಿದರು.
ತುಮಕೂರು ಜಿಲ್ಲಾಧಿಕಾರಿ ಹಾಗೂ ಉಪ ವಿಭಾಗ ಅಧಿಕಾರಿಗಳಿಗೆ ಹೈಕೋರ್ಟ್ ಮಧ್ಯಾಂತರ ಆದೇಶದ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ. ಸ್ಕೂಲಿಗೆ ಬರುವ ಮಕ್ಕಳಿಗೆ ಹಿಜಾಬ್ ಇಲ್ಲದೆ ಬರಬೇಕು ಅಂತ ಹೇಳಿದ್ದಾರೆ. ಅದಕ್ಕಾಗಿ ಹೈಕೋರ್ಟಿನ ಮಧ್ಯಂತರ ಆದೇಶ ಏನಿದೆ ಅದನ್ನು ವಿವರವಾಗಿ ತಿಳಿಸಿದ್ದೇವೆ ಎಂದರು.
ಮೊದಲಿನಿಂದಲೂ ಯಾವ ಕಾಲೇಜಿನಲ್ಲಿ ಹಿಜಾಬ್ ಮತ್ತು ದುಪಟ್ಟ ಹಾಕಿ ಬರಲಾಗುತ್ತಿತ್ತು ಅಲ್ಲಿ ಅವಕಾಶ ನೀಡಬೇಕು ಎಂದು ನ್ಯಾಯಮೂರ್ತಿಗಳ ಮಧ್ಯಂತರ ತೀರ್ಪಿನಲ್ಲಿ ಇದೆ ಎಂದು ಹೇಳಿದ ಅವರು, ಈ ವಿಚಾರವಾಗಿ ನಾವು ಉಪವಿಭಾಗಾಧಿಕಾರಿಗಳಿಗೆ ವಿವರವಾಗಿ ತಿಳಿಸಿ, ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿದ್ದೇವೆ ಎಂದರು.
ತುಮಕೂರು ನಗರದಲ್ಲಿ ಒಂದು ಎಜುಕೇಶನ್ ನಲ್ಲಿ ಹಿಂದುಳಿದ ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದೂ ಮನವಿ ಮಾಡಿದ್ದೇವೆ. ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಕೂಡ ಒಪ್ಪಿದ್ದಾರೆ. ಕೋರ್ಟ್ ಆದೇಶದ ಪ್ರಕಾರ ಮೊದಲಿನಿಂದಲೂ ದುಪ್ಪಟ ಹಾಗೂ ಹಿಜಾಬ್ ಹಾಕಿಕೊಂಡು ಬರುತ್ತಿದ್ದಲ್ಲಿ ಅಲ್ಲಿ ಹಾಕಿಕೊಂಡು ಹೋಗಬಹುದು. ಎಲ್ಲಿ ಹಾಕುವುದಕ್ಕೆ ಮೊದಲಿನಿಂದಲೂ ಅವಕಾಶ ಕೊಟ್ಟಿಲ್ಲವೋ ಅಲ್ಲಿ ಅವಕಾಶ ಇನ್ನೂ ಇರುವುದಿಲ್ಲ. ಅದಕ್ಕಾಗಿ ನಾವು ಮಕ್ಕಳ ಭವಿಷ್ಯ ಕಾಪಾಡಿ ಎಂದು ಮನವಿ ಮಾಡಿಕೊಂಡಿದ್ದೇವೆ. ಅದಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಒಪ್ಪಿ ನಾಳೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ ಎಂದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB