ಹಿಂದೂ ದೇವಾಲಯಗಳಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಅಭಿಯಾನ ಆರಂಭಿಸಿದ್ದು, ಶಿರಸಿ ನಗರದ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ.
ಮನರಂಜನೆಗಾಗಿ ಬರುವ ಬಹುತೇಕ ಪ್ರವಾಸಿಗರು ದೇವಸ್ಥಾನಗಳಿಗೂ ಅದೇ ರೀತಿ ಬರುತ್ತಾರೆ. ಆಡಳಿತ ಮಂಡಳಿಯವರು ಈ ಬಗ್ಗೆ ಜಾಗೃತಿ ಮೂಡಿಸಿ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂದು ಸಮಿತಿ ಆಗ್ರಹಿಸಿದೆ.
ಪಾಶ್ಚಿಮಾತ್ಯ ಶೈಲಿಯ ಉಡುಪು ಧರಿಸುವುದರಿಂದ, ಕೂದಲು ಬಿಚ್ಚಿಟ್ಟುಕೊಳ್ಳುವುದರಿಂದ ದೇಗುಲದಲ್ಲಿ ಕೆಟ್ಟ ಶಕ್ತಿಗಳಿಗೆ ಆಮಂತ್ರಣ ನೀಡಿದಂತಾಗುತ್ತದೆ. ವಿದೇಶಿ ಸಂಸ್ಕೃತಿಯ ಉಡುಪುಗಳಿಂದ ದೇವಸ್ಥಾನದ ಸಾತ್ವಿಕತೆಗೆ ಭಂಗ ಉಂಟಾಗುವುದು ಎಂದು ಸಮಿತಿ ಹೇಳಿದೆ.
ದೇವಸ್ಥಾನ ಆಡಳಿತ ಮಂಡಳಿಯವರು ಮನವಿ ಸ್ವೀಕರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದೆ. ಮಂಡಳಿಯ ಉಪಾಧ್ಯಕ್ಷ ಸುದೇಶ ಜೋಗಳೇಕರ್, ಧರ್ಮದರ್ಶಿ ಸುಧೀರ ಹಂದ್ರಾಳ ಹಾಜರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


