ಚಾಮರಾಜನಗರ: ಪಠ್ಯ ಪುಸ್ತಕ ವಿಚಾರವನ್ನು ರಾಜಕೀಯಗೊಳಿಸಲು ಹಾಗೂ ಹಿಂದೂ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರವಾಗಿ ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಬುಧವಾರ ಮತ ಯಾಚಿಸಿದ ಅವರು, ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ, ಎಲ್ಲ ಸಮಯದಲ್ಲೂ ಯಾವುದೇ ಪರಿಷ್ಕರಣೆಯಾದಾಗ ಗೊಂದಲಗಳಿರುತ್ತವೆ. ವೈಚಾರಿಕವಾಗಿ ವಸ್ತುನಿಷ್ಠವಾಗಿ ವಾದ ಮಾಡಲು ಹತಾಶರಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ ನವರು ಹಿಜಾಬ್ ಅನ್ನು ರಾಜಕೀಯ ಅಸ್ತ್ರವಾಗಿ ಬಳಸಲು ಪ್ರಯತ್ನಿಸಿ ವಿಫಲರಾದರು. ಕೋವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸಿದಾಗ ಈ ರೀತಿಯ ಮಾತುಗಳನ್ನಾಡಿ ವಿಫಲರಾದರು. ಉತ್ತರ ಪ್ರದೇಶ ಚುನಾವಣೆ ಬಳಿಕ ಕಾಂಗ್ರೆಸ್ ದೇಶದಲ್ಲಿ ಎಲ್ಲೂ ಇಲ್ಲದಾಗಿಬಿಡುತ್ತದೆಯೋ ಎಂಬ ಭಯ ಶುರುವಾಗಿ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5