ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂದೂ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಸಿಪಿಐ ಕರೆಪ್ಪ ಬನ್ನೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಸೆಪ್ಟೆಂಬರ್ 6 ರಂದು ಗಣಪತಿ ಮೆರವಣಿಗೆ ವೇಳೆ ಸಿಪಿಐ, ಬೇಗ ಗಣೇಶ ಮೆರವಣಿ ಸಾಗಿಸಿ ಎಂದು ಹೇಳಿದ್ದಕ್ಕೆ ಸಿಪಿಐ ಸೇರಿದಂತೆ ಇಬ್ಬರು ಕಾನ್ಸ್’ಟೇಬಲ್ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು.
ನಂತರ ಸಿಪಿಐ ಕರೆಪ್ಪ ಬನ್ನೆ ಈ ಆರು ಮಂದಿಗೆ ಜೈಲಿನಲ್ಲಿ ಟಾರ್ಚರ್ ನೀಡಿದ್ದರು ಎಂದು ಹಿಂದೂ ಜಾಗರಣಾ ವೇದಿಕೆ ಕೆರೂರು ಚಲೋ ಪ್ರತಿಭಟನೆ ನಡೆಸಿದ್ದರು.
ಸುಳ್ಳು ಪ್ರಕರಣ ದಾಖಲಿಸಿದ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಎಸ್ ಪಿ ಜಯಪ್ರಕಾಶ್ ಸಿಪಿಐ ಕರೆಪ್ಪ ಬನ್ನೆ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


