ಕ್ಯಾಲಿಫೋರ್ನಿಯಾದ ನೆವಾರ್ಕ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ದಾಳಿ. ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಗೀಚುಬರಹವನ್ನು ಮಾಡಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನೆವಾರ್ಕ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಹೊರ ಗೋಡೆಗಳನ್ನು ಖಲಿಸ್ತಾನ್ ಪರ ಬೆಂಬಲಿಗರು ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಗೀಚುಬರಹದಿಂದ ವಿರೂಪಗೊಳಿಸಿದ್ದಾರೆ. ಹೊರಗೋಡೆಯಲ್ಲಿ ಗೋಡೆ ಬರಹ ಕಂಡು ಬಂದ ನಂತರ ದೇವಸ್ಥಾನದ ಆಡಳಿತ ಮಂಡಳಿ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ದೇವಸ್ಥಾನದ ಅಧಿಕಾರಿಗಳು ಹೇಳಿದ್ದಾರೆ.
ದೇವಾಲಯದ ಗೋಡೆಯ ಚಿತ್ರಗಳನ್ನು ಹಿಂದೂ ಅಮೇರಿಕನ್ ಫೌಂಡೇಶನ್ X ಹಂಚಿಕೊಂಡಿದೆ. ಘಟನೆಯನ್ನು ದ್ವೇಷದ ಅಪರಾಧವೆಂದು ಪರಿಗಣಿಸಲಾಗುತ್ತಿದೆ ಮತ್ತು ನೆವಾರ್ಕ್ ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ವಿಭಾಗಕ್ಕೆ ಸೂಚನೆ ನೀಡಿದೆ ಎಂದು ಫೌಂಡೇಶನ್ ಹೇಳಿದೆ.


