ಮಂಗಳೂರಿನ ನಂತೂರಿನಲ್ಲಿ ಹಿಂದೂ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ.
ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್ ಯುವತಿ ಜೊತೆ ಪ್ರಯಾಣಿಸುತ್ತಿದ್ದರು.ಬಸ್ ನಂತೂರು ಜಂಕ್ಷನ್‌ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ನಿಂದಿಸಿ ಬಸ್‌ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದ್ದಾರೆ. ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ.
ಎಡಿಜಿಪಿ (ಕಾನೂನು ಸುವ್ಯವಸ್ಥೆ) ಅಲೋಕ್‌ಕುಮಾರ್, ಈ ಘಟನೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


