ಉರಿಗೌಡ, ನಂಜೇಗೌಡರ ವಿಚಾರಗಳು ಮುನ್ನೆಲೆಗೆ ಬಂದಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವಾಗಿಸಿಕೊಂಡು ಆಡಳಿತ ಪಕ್ಷದ ವಿರುದ್ಧ ಕೆಂಡಕಾರುತ್ತಿವೆ. ಇದೀಗ ಈ ಕುರಿತು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉರಿಗೌಡ, ನಂಜೇಗೌಡ ಸ್ವಾಭಿಮಾನಿಗಳು, ಅವರು ಧರ್ಮಕ್ಕಾಗಿ ಹೋರಾಟ ಮಾಡಿದವರಾಗಿದ್ದಾರೆ. ನಮ್ಮ ದೇವಸ್ಥಾನ ಉಳಿಸುವುದಾಕ್ಕಾಗಿ ಹೋರಾಟ ಮಾಡಿದ್ದಾರೆ ಎಂದಿದ್ದಾರೆ .
ಹಿಂದುಗಳ ಕ್ರೈಸ್ತ ನರಮೇಧ ಖಂಡಿಸಿ ಹೋರಾಡಿದ್ದಾರೆ. ಹೀಗೆ ಉರಿಗೌಡ ನಂಜೇಗೌಡರ ಬಗ್ಗೆ ಹೆಮ್ಮೆಯ ಇದೆ ಎಂದು ಕಾಂಗ್ರೆಸ್ ಜೆಡಿಎಸ್ ಆರೋಪಕ್ಕೆ ಶೋಭಾ ಕರದ್ಲಾಂಜೆ ತಿರುಗೇಟು ನೀಡಿದ್ದಾರೆ.
ಟಿಪ್ಪು ಸುಲ್ತಾನ್ ಮಂಗಳೂರಿನಲ್ಲಿ ಕ್ರೈಸ್ತರ ಹಾಗೂ ಕೊಡವರ ನರಮೇಧವನ್ನು ಕೊಡಗಿನಲ್ಲಿ ಮಾಡಿದ್ದಾರೆ. ನಂದಿ ಬೆಟ್ಡದ ಮೇಲೆ ಹಿಂದುಗಳನ್ನು ಕೊಂದು ಹಾಕಿದ್ದಾರೆ. ಕನ್ನಡ ವಿರೋಧಿಯಾಗಿದ್ದವರ ವಿರುದ್ಧ ಸೆಟೆದು ನಿಂತವವರು ನಂಜೇಗೌಡ ಉರಿಗೌಡರು ಎಂದು ಜೆಡಿಎಸ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


