ಬೆಂಗಳೂರು: ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ, ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು ಎಂದು ಅವರು ಹೇಳಿದ್ದಾರೆ.
ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದು ಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz