ಮಂಗಳೂರು: ಹಿಂದೂಗಳೇ ನೀವು ಧೈರ್ಯವಾಗಿ ಮತಾಂತರ ಮಾಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ.
ಮಂಗಳೂರಿನ ಉಜಿರೆಯಲ್ಲಿ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರಾದರೂ ನಿಮ್ಮನ್ನು ಮತಾಂತರ ಆಗಿ ಎಂದ ಹೇಳಿದರೆ ನೀವು ನಮ್ಮ ಸಮಾಜ ನಿಮ್ಮನ್ನು ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಎಂದು ಕರೆಯಿರಿ ಎಂದು ಹೇಳಿದರು.
ಇತ್ತೀಚೆಗೆ ಬಜರಂಗದಳದವರು ಸಂಕಲ್ಪ ತಗೊಂಡಿದ್ದಾರೆ. ಹಿಂದೂಗಳ ಸಂಖ್ಯೆ ಜಾಸ್ತಿ ಮಾಡಲು ಏನು ಐಡಿಯಾ ಇದೆ ಎಂದು ಕೇಳಿದಾಗ ಹೆಚ್ಚು ಮಕ್ಕಳನ್ನು ಮಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು. ಆದರೆ ನಮ್ಮ ಜನ ನಾಲ್ಕೈದು ಮಕ್ಕಳನ್ನ ಮಾಡ್ತಾರಾ? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟ ಇಲ್ಲ. ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್, ಇಂಜಿನಿಯರ್ ಆಗಿ ಮಾಡಬೇಕು ಅನ್ನೋದಷ್ಟೇ ಇದೆ. ಹಾಗಾಗಿ ಓದಿಸೋ ತಾಕತ್ತು ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ. ಹಾಗಾಗಿ ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ ಎಂದು ಕರೆ ನೀಡಿದರು.
ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು. ಅಂದರೆ ಅದರ ಅರ್ಥ ನೀವೂ ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಅಂತ ಪ್ರಶ್ನೆ ಮಾಡಿದ್ರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————