ಪಾವಗಡ: ಹೈನುಗಾರಿಕೆಯಲ್ಲಿ ಉತ್ತಮ ಲಾಭ ಪಡೆಯಬಹುದು, ಆದ್ದರಿಂದ ಗುಣಮಟ್ಟದ ಹಾಲು ನೀಡಿ ಎಂದು ಕೆಎಂಎಫ್ ನಿರ್ದೇಶಕ ಹಾಗೂ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಚೆನ್ನಮಲ್ಲಯ್ಯ ರೈತರಿಗೆ ಕರೆ ನೀಡಿದರು.
ತಾಲೂಕಿನ ತುಮಕೂರು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣಕಯಂತ್ರ ಮತ್ತು ಹೊಸದುರ್ಗ ಮಹಿಳಾ ಸ್ವಸಹಾಯ ಸಂಘಕ್ಕೆ 2 ಲಕ್ಷ ಚೆಕ್ ವಿತರಣೆ ಮಾಡಿ ಮಾತನಾಡಿದ ಅವರು, ರಾಜ್ಯದ 14 ಒಕ್ಕೂಟಗಳಲ್ಲಿ ತುಮಕೂರು ಎರಡನೇ ಲಾಭದಾಯಕ ಸ್ಥಾನದಲ್ಲಿದೆ.
ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ಶಾಲಾ ಮಕ್ಕಳಿಗೆ ಹಾಲಿನ ಪುಡಿ ವಿತರಣೆಯಾಗುತ್ತಿದೆ. ನಂದಿನಿ ತುಪ್ಪ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸರಬರಾಜಾಗುತ್ತಿದೆ. ಜಿಲ್ಲಾದ್ಯಂತ ಒಟ್ಟು ಹಾಲು ಉತ್ಪಾದನೆ 7 ಲಕ್ಷ 6 ಸಾವಿರ ಲೀಟರ್ ಆಗುತ್ತಿದೆ. ಇದನ್ನು ಸಮರ್ಪಕವಾಗಿ ನಿರ್ವಹಿಸಿ ಬಂದಂತ ಲಾಭಾಂಶವನ್ನು ಹಾಲು ನಂದಿನಿ ಡೈರಿಗೆ ಹಾಕುವ ರೈತರಿಗೆ ವಿತರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮುಖ್ಯಸ್ಥ ದಿಲೀಪ್ ಕುಮಾರ್, ವಿಸ್ತರಣಾಧಿಕಾರಿ ಸುನಿತಾ, ತಾಲೂಕಿನ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy