ಚಿತ್ರದುರ್ಗ: ಶ್ರೀ ಆಂಜನೇಯ ವಿದ್ಯಾ ಸಂಸ್ಥೆ ಚಿತ್ರದುರ್ಗ, ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಹಿರೇಗುಂಟನೂರು, ಶ್ರೀ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 1988-89ನೇ ಸಾಲಿನಿಂದ 2022-23ನೇ ಸಾಲಿ ನ ವರೆಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಂದ ಗುರುವಂದನ ಕಾರ್ಯಕ್ರಮವು ಹಿರೇಗುಂಟನೂರು ಕಾಲೇಜಿನ ಆವರಣದಲ್ಲಿ ನವೆಂಬರ್ 12ರಂದು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿತ್ರದುರ್ಗದ ಮದಕರಿ ನಾಯಕ ವಿದ್ಯಾ ಸಂಸ್ಥೆ ಅಧ್ಯಕ್ಷ ಎಸ್. ಸಂದೀಪ್, ಚಿತ್ರದುರ್ಗ ಶ್ರೀ ಆಂಜನೇಯ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ದಿವ್ಯ ಸರಸ್ವತಿ ಎಸ್. ಸಂದೀಪ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕರಾದ ಡಾ. ಕವಿತ ಬಿ.ಟಿ, ಐ.ಪಿ.ಎಸ್., ಚಿತ್ರದುರ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎನ್.ರಾಜು, ತ್ರದುರ್ಗಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಬಿ.ಮಲ್ಲೇಶ್ , ಹಿರೇಗುಂಟನೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಟಿ. ಜ್ಯೋತಿ ಚಂದ್ರಶೇಖರ್, ಹಿರೇಗುಂಟನೂರು ಪಿ.ಡಿ.ಓ. ವನಜಾಕ್ಷಿ ಬಿ., ಶ್ರೀ ದ್ಯಾಮಲಾಂಬ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ವಸಂತ್ ಎನ್. ಬಡಿಗೇರ್ , ಹಿರೇಗುಂಟನೂರು ಸ.ಹಿ.ಪ್ರಾಶಾಲೆ ಮುಖ್ಯ ಶಿಕ್ಷಕರಾದ ವಿ.ಮೂರ್ತಿ, ಪೊಲೀಸ್ ಇಲಾಖೆಯ ಎಸ್ ವೆಂಕಟೇಶ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹಿರೇಗುಂಟನೂರು ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಎಲ್ಲಾ ಹಳೆಯ ವಿದ್ಯಾರ್ಥಿಗಳು, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


