ಬೆಂಗಳೂರಿನ ಭೈರಸಂಧ್ರದಲ್ಲಿ ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮನ್ ದೀಪ್ ರಾಯ್ (75) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮನ್ ದೀಪ್ ರಾಯ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂದು ಸಂಜೆ ಮನ್ ದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ.
ಕಳೆದ ವರ್ಷದ ಡಿಸೆಂಬರ್ ನಲ್ಲಿ ಮನ್ ದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟು ಮಿಂಚಿನ ಓಟ, ಏಳು ಸುತ್ತಿನ ಕೋಟೆ, ಆಕಸ್ಮಿಕ, ರೇ, ಬೆಂಕಿಯ ಬಲೆ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy